Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್
T20 World Cup 2024: ಟಿ20 ವಿಶ್ವಕಪ್ನ 11ನೇ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಪಾಕಿಸ್ತಾನ್ ತಂಡವು ಹೀನಾಯ ಸೋಲನುಭವಿಸಿತ್ತು. ಈ ಸೋಲಿನ ನಡುವೆಯೂ ಪಾಕ್ ತಂಡದ ನಾಯಕ ಬಾಬರ್ ಆಝಂ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.
1 / 5
T20 World Cup 2024: ಟಿ20 ವಿಶ್ವಕಪ್ನ 11ನೇ ಪಂದ್ಯದ ಮೂಲಕ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ (Babar Azam) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 5
ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಯುಎಸ್ಎ ವಿರುದ್ದದ ಪಂದ್ಯದಲ್ಲಿ ಬಾಬರ್ ಆಝಂ 43 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 44 ರನ್ ಬಾರಿಸಿದ್ದರು. ಈ 44 ರನ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.
3 / 5
ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ 110 ಟಿ20 ಇನಿಂಗ್ಸ್ಗಳಿಂದ 4038 ರನ್ ಕಲೆಹಾಕಿ ವಿಶ್ವ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ಬಾಬರ್ ಯಶಸ್ವಿಯಾಗಿದ್ದಾರೆ.
4 / 5
ಈವರೆಗೆ 113 ಟಿ20 ಇನಿಂಗ್ಸ್ ಆಡಿರುವ ಬಾಬರ್ ಆಝಂ ಒಟ್ಟು 4067 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
5 / 5
ಅಂದಹಾಗೆ ಬಾಬರ್ ಆಝಂ ಮತ್ತು ವಿರಾಟ್ ಕೊಹ್ಲಿ ನಡುವೆ ಕೇವಲ 29 ರನ್ಗಳ ವ್ಯತ್ಯಾಸವಷ್ಟೇ ಇದೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಈ ವಿಶ್ವ ದಾಖಲೆಯನ್ನು ಮತ್ತೊಮ್ಮೆ ತಮ್ಮದಾಗಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.