David Warner: ಕ್ರೀಸ್ ಗೇಲ್ ದಾಖಲೆ ಉಡೀಸ್: ವಿಶ್ವ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್
T20 World Cup 2024: ಟಿ20 ವಿಶ್ವಕಪ್ 10ನೇ ಪಂದ್ಯದ ಮೂಲಕ ಆಸ್ಟ್ರೇಲಿಯನ್ ಓಪನರ್ ಡೇವಿಡ್ ವಾರ್ನರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಸರದಾರ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
1 / 6
T20 World Cup 2024: ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಒಮಾನ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಾರ್ನರ್ 51 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 56 ರನ್ ಬಾರಿಸಿದ್ದಾರೆ.
2 / 6
ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ನ ಅನಭಿಷಿಕ್ತ ದೊರೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಮುರಿದರು. ಆ ದಾಖಲೆ ಯಾವುದು? ಎಷ್ಟು ಪಂದ್ಯಗಳಲ್ಲಿ ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದಾರೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...
3 / 6
ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು 50+ ಸ್ಕೋರ್ಗಳಿಸಿದ ವಿಶ್ವ ದಾಖಲೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 455 ಟಿ20 ಇನಿಂಗ್ಸ್ ಆಡಿರುವ ಗೇಲ್ ಒಟ್ಟು 110 ಬಾರಿ 50+ ಸ್ಕೋರ್ ಬಾರಿಸಿದ್ದರು. ಇದರಲ್ಲಿ 22 ಶತಕಗಳು ಮತ್ತು 88 ಅರ್ಧಶತಕಗಳು ಒಳಗೊಂಡಿವೆ.
4 / 6
ಇದೀಗ ಕ್ರಿಸ್ ಗೇಲ್ ಹೆಸರಿನಲ್ಲಿದ್ದ 110 ಫಿಫ್ಟಿ ಪ್ಲಸ್ ಸ್ಕೋರ್ಗಳ ದಾಖಲೆಯನ್ನು ಡೇವಿಡ್ ವಾರ್ನರ್ ಮುರಿದಿದ್ದಾರೆ. 378 ಟಿ20 ಇನಿಂಗ್ಸ್ ಆಡಿರುವ ವಾರ್ನರ್ 111 ಬಾರಿ 50+ ಸ್ಕೋರ್ ಗಳಿಸಿದ್ದಾರೆ. ಇದರಲ್ಲಿ 103 ಅರ್ಧಶತಕಗಳು ಹಾಗೂ 8 ಶತಕಗಳು ಕೂಡ ಸೇರಿವೆ.
5 / 6
ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿದ ವಿಶ್ವ ದಾಖಲೆಯನ್ನು ಡೇವಿಡ್ ವಾರ್ನರ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ತಮ್ಮ ಕೊನೆಯ ಟಿ20 ವಿಶ್ವಕಪ್ ಮೂಲಕ ಎಂಬುದು ವಿಶೇಷ.
6 / 6
ಅಂದರೆ ಈ ಬಾರಿಯ ಟಿ20 ವಿಶ್ವಕಪ್ನೊಂದಿಗೆ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಟಿ20 ಕೆರಿಯರ್ಗೆ ವಿದಾಯ ಹೇಳಲಿದ್ದಾರೆ. ಇದಕ್ಕೂ ಮುನ್ನ ಟಿ20 ಕ್ರಿಕೆಟ್ ಸರ್ವಶ್ರೇಷ್ಠ ದಾಖಲೆಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ವಾರ್ನರ್ ಯಶಸ್ವಿಯಾಗಿರುವುದು ವಿಶೇಷ.