- Kannada News Photo gallery Cricket photos T20 World Cup 2024: Franco Nsubuga Created New World Record
T20 World Cup 2024: ಟಿ20 ವಿಶ್ವಕಪ್ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್
T20 World Cup 2024: ಉಗಾಂಡ ತಂಡವು ಟಿ20 ವಿಶ್ವಕಪ್ನಲ್ಲಿ ತನ್ನ ಮೊದಲ ಜಯ ಸಾಧಿಸಿದೆ. ಪಪುವಾ ನ್ಯೂ ಗಿನಿಯಾ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್ಗಳ ಜಯ ಸಾಧಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ. ವಿಶೇಷ ಎಂದರೆ ಈ ಪಂದ್ಯದ ಮೂಲಕವೇ ಹಿರಿಯ ಸ್ಪಿನ್ನರ್ ಫ್ರಾಂಕ್ ನ್ಸುಬುಗಾ ಹೊಸ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಆ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...
Updated on: Jun 06, 2024 | 8:55 AM

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 9ನೇ ಪಂದ್ಯದಲ್ಲಿ ಉಗಾಂಡ ಸ್ಪಿನ್ನರ್ ಫ್ರಾಂಕ್ ನ್ಸುಬುಗಾ (Franco Nsubuga) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ 4 ಓವರ್ಗಳಲ್ಲಿ ಕೇವಲ 4 ರನ್ ನೀಡುವ ಮೂಲಕ ಎಂಬುದು ವಿಶೇಷ.

ಪಪುವಾ ನ್ಯೂ ಗಿನಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಉಗಾಂಡ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. ಅದರಲ್ಲೂ 43 ವರ್ಷದ ಹಿರಿಯ ಸ್ಪಿನ್ನರ್ ಫ್ರಾಂಕ್ ನ್ಸುಬುಗಾ ಸ್ಪಿನ್ ಮೋಡಿಯೊಂದಿಗೆ ಪಪುವಾ ನ್ಯೂ ಗಿನಿಯಾ ಬ್ಯಾಟರ್ಗಳನ್ನು ಕಟ್ಟಿ ಹಾಕಿದರು.

ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಫ್ರಾಂಕ್ ನ್ಸುಬುಗಾ 2 ಮೇಡನ್ ಓವರ್ ಜೊತೆಗೆ ಕೇವಲ 4 ರನ್ ನೀಡಿ 2 ವಿಕೆಟ್ ಕಬಳಿಸಿದರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಕಡಿಮೆ ರನ್ ನೀಡಿ 4 ಓವರ್ಗಳನ್ನು ಪೂರೈಸಿದ ವಿಶ್ವ ದಾಖಲೆ ಫ್ರಾಂಕ್ ನ್ಸುಬುಗಾ ಪಾಲಾಯಿತು.

ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ವೇಗಿ ಅನ್ರಿಕ್ ನೋಕಿಯಾ ಹೆಸರಿನಲ್ಲಿತ್ತು. ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಶ್ರೀಲಂಕಾ ವಿರುದ್ಧ 4 ಓವರ್ಗಳಲ್ಲಿ ಕೇವಲ 7 ರನ್ ನೀಡುವ ಮೂಲಕ ನೋಕಿಯಾ ಈ ದಾಖಲೆ ಬರೆದಿದ್ದರು.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಉಗಾಂಡ ಬೌಲರ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಕಡಿಮೆ ರನ್ ನೀಡಿ 4 ಓವರ್ಗಳನ್ನು ಪೂರೈಸಿದ ವಿಶ್ವ ದಾಖಲೆಯನ್ನು ಫ್ರಾಂಕ್ ನ್ಸುಬುಗಾ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಪುವಾ ನ್ಯೂ ಗಿನಿಯಾ ತಂಡವು 19.1 ಓವರ್ಗಳಲ್ಲಿ 77 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಉಗಾಂಡ ತಂಡವು 7 ವಿಕೆಟ್ ಕಳೆದುಕೊಂಡು 18.2 ಓವರ್ಗಳಲ್ಲಿ ಗುರಿ ಮುಟ್ಟಿದೆ. ಈ ಮೂಲಕ 3 ವಿಕೆಟ್ಗಳ ರೋಚಕ ಜಯ ಸಾಧಿಸಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




