T20 World Cup 2024: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್

T20 World Cup 2024: ಉಗಾಂಡ ತಂಡವು ಟಿ20 ವಿಶ್ವಕಪ್​ನಲ್ಲಿ ತನ್ನ ಮೊದಲ ಜಯ ಸಾಧಿಸಿದೆ. ಪಪುವಾ ನ್ಯೂ ಗಿನಿಯಾ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ. ವಿಶೇಷ ಎಂದರೆ ಈ ಪಂದ್ಯದ ಮೂಲಕವೇ ಹಿರಿಯ ಸ್ಪಿನ್ನರ್ ಫ್ರಾಂಕ್ ನ್ಸುಬುಗಾ ಹೊಸ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಆ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Jun 06, 2024 | 8:55 AM

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 9ನೇ ಪಂದ್ಯದಲ್ಲಿ ಉಗಾಂಡ ಸ್ಪಿನ್ನರ್ ಫ್ರಾಂಕ್ ನ್ಸುಬುಗಾ (Franco Nsubuga) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ 4 ಓವರ್​ಗಳಲ್ಲಿ ಕೇವಲ 4 ರನ್ ನೀಡುವ ಮೂಲಕ ಎಂಬುದು ವಿಶೇಷ.

1 / 6
ಪಪುವಾ ನ್ಯೂ ಗಿನಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಉಗಾಂಡ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. ಅದರಲ್ಲೂ 43 ವರ್ಷದ ಹಿರಿಯ ಸ್ಪಿನ್ನರ್ ಫ್ರಾಂಕ್ ನ್ಸುಬುಗಾ ಸ್ಪಿನ್ ಮೋಡಿಯೊಂದಿಗೆ ಪಪುವಾ ನ್ಯೂ ಗಿನಿಯಾ ಬ್ಯಾಟರ್​ಗಳನ್ನು ಕಟ್ಟಿ ಹಾಕಿದರು.

2 / 6
ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಫ್ರಾಂಕ್ ನ್ಸುಬುಗಾ 2 ಮೇಡನ್ ಓವರ್ ಜೊತೆಗೆ ಕೇವಲ 4 ರನ್ ನೀಡಿ 2 ವಿಕೆಟ್ ಕಬಳಿಸಿದರು. ಇದರೊಂದಿಗೆ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಅತೀ ಕಡಿಮೆ ರನ್ ನೀಡಿ 4 ಓವರ್​ಗಳನ್ನು ಪೂರೈಸಿದ ವಿಶ್ವ ದಾಖಲೆ ಫ್ರಾಂಕ್ ನ್ಸುಬುಗಾ ಪಾಲಾಯಿತು.

3 / 6
ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ವೇಗಿ ಅನ್ರಿಕ್ ನೋಕಿಯಾ ಹೆಸರಿನಲ್ಲಿತ್ತು. ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಶ್ರೀಲಂಕಾ ವಿರುದ್ಧ 4 ಓವರ್​ಗಳಲ್ಲಿ ಕೇವಲ 7 ರನ್ ನೀಡುವ ಮೂಲಕ ನೋಕಿಯಾ ಈ ದಾಖಲೆ ಬರೆದಿದ್ದರು.

4 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಉಗಾಂಡ ಬೌಲರ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಕಡಿಮೆ ರನ್ ನೀಡಿ 4 ಓವರ್​ಗಳನ್ನು ಪೂರೈಸಿದ ವಿಶ್ವ ದಾಖಲೆಯನ್ನು  ಫ್ರಾಂಕ್ ನ್ಸುಬುಗಾ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಪುವಾ ನ್ಯೂ ಗಿನಿಯಾ ತಂಡವು 19.1 ಓವರ್​ಗಳಲ್ಲಿ 77 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಉಗಾಂಡ ತಂಡವು 7 ವಿಕೆಟ್ ಕಳೆದುಕೊಂಡು 18.2 ಓವರ್​ಗಳಲ್ಲಿ ಗುರಿ ಮುಟ್ಟಿದೆ. ಈ ಮೂಲಕ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

6 / 6
Follow us
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ