Haris Rauf: ವಿಶ್ವ ದಾಖಲೆ ನಿರ್ಮಿಸಿದ ಹ್ಯಾರಿಸ್ ರೌಫ್

|

Updated on: Jun 12, 2024 | 12:15 PM

T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡದ ವೇಗಿ ಹ್ಯಾರಿಸ್ ರೌಫ್ ಟಿ20 ಕ್ರಿಕೆಟ್​ನಲ್ಲಿ 100 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 2ನೇ ಪಾಕ್ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನ್ ತಂಡದ ಸ್ಪಿನ್ನರ್ ಶಾದಾಬ್ ಖಾನ್ ಈ ಸಾಧನೆ ಮಾಡಿದ್ದರು.

1 / 6
T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಕೆನಡಾ ವಿರುದ್ಧದ ಪಂದ್ಯದ ಮೂಲಕ ಪಾಕ್ ವೇಗಿ ಹ್ಯಾರಿಸ್ ರೌಫ್ (Haris Rauf) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್​ನಲ್ಲಿ 100 ವಿಕೆಟ್​ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ.

2 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತ್ತು. ಈ ವೇಳೆ 4 ಓವರ್​ಗಳನ್ನು ಎಸೆದಿದ್ದ ಹ್ಯಾರಿಸ್ ರೌಫ್ 26 ರನ್ ನೀಡಿ 2 ವಿಕೆಟ್ ಕಬಳಿಸಿದ್ದರು. ಈ ಎರಡು ವಿಕೆಟ್​ಗಳೊಂದಿಗೆ ಹ್ಯಾರಿಸ್ ರೌಫ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳನ್ನು ಪೂರೈಸಿದ್ದಾರೆ.

3 / 6
ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ನೂರು ವಿಕೆಟ್ ಪಡೆದ ವೇಗದ ಬೌಲರ್ ಎಂಬ ವಿಶ್ವ ದಾಖಲೆ ಹ್ಯಾರಿಸ್ ರೌಫ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಬಿಲಾಲ್ ಖಾನ್ ಹೆಸರಿನಲ್ಲಿತ್ತು.

4 / 6
ಒಮಾನ್ ತಂಡದ ವೇಗಿ ಬಿಲಾಲ್ ಖಾನ್ ಟಿ20 ಕ್ರಿಕೆಟ್​ನಲ್ಲಿ ಕೇವಲ 71 ಇನಿಂಗ್ಸ್​ಗಳಲ್ಲಿ 100 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಹ್ಯಾರಿಸ್ ರೌಫ್ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ.

5 / 6
ಪಾಕ್ ವೇಗಿ 69 ಇನಿಂಗ್ಸ್​ಗಳ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಹ್ಯಾರಿಸ್ ರೌಫ್ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ನೂರು ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

6 / 6
ಇನ್ನು ಟಿ20 ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ 100 ವಿಕೆಟ್​ಗಳನ್ನು ಕಬಳಿಸಿದ ಬೌಲರ್ ದಾಖಲೆ ರಶೀದ್ ಖಾನ್ ಹೆಸರಿನಲ್ಲಿದೆ. ಅಪ್ಘಾನ್ ಸ್ಪಿನ್ನರ್ ರಶೀದ್ ಖಾನ್ 53 ಪಂದ್ಯಗಳ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ನೂರು ವಿಕೆಟ್ ಕಬಳಿಸಿದ್ದಾರೆ. ಇದೀಗ ವೇಗದ ಬೌಲರ್​ಗಳ ಪಟ್ಟಿಯಲ್ಲಿ ಹ್ಯಾರಿಸ್ ರೌಫ್ ಅಗ್ರಸ್ಥಾನಕ್ಕೇರಿದ್ದಾರೆ.