T20 World Cup 2024: ಟೀಮ್ ಇಂಡಿಯಾದ ಮುಂದಿನ ಎದುರಾಳಿ ಆಸ್ಟ್ರೇಲಿಯಾ
T20 World Cup 2024: ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಒಟ್ಟು 6 ಅಂಕಗಳನ್ನು ಕಲೆಹಾಕುವ ಮೂಲಕ ಭಾರತ ತಂಡವು ಸೂಪರ್-8 ಹಂತಕ್ಕೇರಿದೆ. ದ್ವಿತೀಯ ಸುತ್ತಿನ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಕೆನಡಾ ತಂಡವನ್ನು ಎದುರಿಸಲಿದೆ. ಜೂನ್ 15 ರಂದು ನಡೆಯಲಿರುವ ಈ ಪಂದ್ಯಕ್ಕೆ ಲಾಡರ್ಹಿಲ್ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ.
1 / 6
T20 World Cup 2024: ಯುಎಸ್ಎ ವಿರುದ್ಧದ ಗೆಲುವಿನೊಂದಿಗೆ ಭಾರತ ತಂಡ ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ನಲ್ಲಿ ಆಡಿರುವ 3 ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ಮುಂದಿನ ಸುತ್ತಿಗೆ ಪ್ರವೇಶಿಸಿದೆ.
2 / 6
ಅದರಂತೆ ಜೂನ್ 19 ರಿಂದ ಶುರುವಾಗಲಿರುವ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಭಾರತ ತಂಡ ಗ್ರೂಪ್-1 ರಲ್ಲಿ ಕಣಕ್ಕಿಳಿಯುವುದು ಕೂಡ ಖಚಿತವಾಗಿದೆ. ವಿಶೇಷ ಎಂದರೆ ಇದೇ ಗ್ರೂಪ್ನಲ್ಲಿ ಆಸ್ಟ್ರೇಲಿಯಾ ಕೂಡ ಸ್ಥಾನ ಪಡೆದಿದೆ.
3 / 6
ಗ್ರೂಪ್-ಬಿ ನಲ್ಲಿ ಆಡಿರುವ ಮೂರು ಮ್ಯಾಚ್ಗಳಲ್ಲೂ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ ಸೂಪರ್-8 ಹಂತಕ್ಕೆ ಪ್ರವೇಶಿಸಿದೆ. ಈ ಮೂಲಕ ಗ್ರೂಪ್-1 ರಲ್ಲಿ ಸ್ಥಾನ ಪಡೆದಿದೆ. ಅದರಂತೆ ಮುಂದಿನ ಸುತ್ತಿನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿರುವುದು ಖಚಿತವಾಗಿದೆ.
4 / 6
ಜೂನ್ 24 ರಂದು ವೆಸ್ಟ್ ಇಂಡೀಸ್ನ ಸೆಂಟ್ ಲೂಸಿಯಾದಲ್ಲಿ ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಪಂದ್ಯವು ಉಭಯ ತಂಡಗಳಿಗೂ ಸೂಪರ್-8 ಹಂತದ ಕೊನೆಯ ಪಂದ್ಯವಾಗಿರಲಿದ್ದು, ಹೀಗಾಗಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
5 / 6
ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.
6 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.