T20 World Cup 2024: ಭಾರತದ ಮುಂದಿನ 2 ಪಂದ್ಯಗಳು ಯಾವಾಗ, ಯಾರ ವಿರುದ್ಧ? ಇಲ್ಲಿದೆ ಮಾಹಿತಿ

|

Updated on: Jun 10, 2024 | 2:59 PM

T20 World Cup 2024: ಭಾರತ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಒಂದರಲ್ಲಿ ಜಯ ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಅಂದರೆ ಗ್ರೂಪ್-ಎ ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಳ್ಳುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಇದೀಗ ಭಾರತ ತಂಡವು ಅಗ್ರಸ್ಥಾನದಲ್ಲಿದ್ದು, ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದೆ.

1 / 6
T20 World Cup 2024: ಟಿ20 ವಿಶ್ವಕಪ್​ 2024 ರಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದ್ದ ಭಾರತ ತಂಡ, 2ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿದೆ.

2 / 6
ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಕೇವಲ 119 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವನ್ನು 113 ರನ್​ಗಳಿಗೆ ನಿಯಂತ್ರಿಸುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿದೆ.

3 / 6
ಈ ಗೆಲುವಿನೊಂದಿಗೆ ಭಾರತ ತಂಡವು ಗ್ರೂಪ್-ಎ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅದರಂತೆ ಮುಂದಿನ 2 ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದು ಖಚಿತ. ಭಾರತ ತಂಡದ ಮುಂದಿನ ಪಂದ್ಯಗಳು ಯಾವಾಗ, ಯಾರ ವಿರುದ್ಧ ಎಂದು ನೋಡುವುದಾದರೆ....

4 / 6
ಜೂನ್ 12 (ಬುಧವಾರ) ಭಾರತ vs ಯುಎಸ್​ಎ: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ಜೂನ್ 12 ರಂದು ನಡೆಯಲಿರುವ ಟಿ20 ವಿಶ್ವಕಪ್​ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ.

5 / 6
ಜೂನ್ 15 (ಶನಿವಾರ) ಭಾರತ vs ಕೆನಡಾ: ಅಮೆರಿಕದ ಲಾಡರ್ಹಿಲ್​ನ ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 33ನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶರುವಾಗಲಿದೆ.

6 / 6
ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.