Lockie Ferguson: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಲಾಕಿ ಫರ್ಗುಸನ್

|

Updated on: Jun 18, 2024 | 3:05 PM

T20 World Cup 2024: ಟಿ20 ವಿಶ್ವಕಪ್​ನ 39ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಜಯಭೇರಿ ಬಾರಿಸಿದೆ. ಪಪುವಾ ನ್ಯೂ ಗಿನಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಪುವಾ ನ್ಯೂ ಗಿನಿಯಾ ತಂಡವು 78 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 12.2 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 79 ರನ್​ಗಳಿಸಿ 7 ವಿಕೆಟ್​ಗಳ ಜಯ ಸಾಧಿಸಿದೆ.

1 / 7
T20 World Cup 2024: ಟಿ20 ವಿಶ್ವಕಪ್​ನ 39ನೇ ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್ (Lockie Ferguson) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಅಂತಿಂಥ ವಿಶ್ವ ದಾಖಲೆಯಲ್ಲ ಎಂಬುದು ವಿಶೇಷ. ಹಾಗಿದ್ರೆ ಕಿವೀಸ್ ವೇಗಿ ನಿರ್ಮಿಸಿದ ಹೊಸ ವರ್ಲ್ಡ್ ರೆಕಾರ್ಡ್​ನ ವಿಶೇಷತೆ ಏನೆಂದು ತಿಳಿಯೋಣ...

2 / 7
ಟ್ರಿನಿಡಾಡ್​ನ ಬ್ರಿಯಾನ್​ ಲಾರಾ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಈ​ ಪಂದ್ಯದಲ್ಲಿ ನ್ಯೂಝಿಲೆಂಡ್ ಹಾಗೂ ಪಪುವಾ ನ್ಯೂ ಗಿನಿಯಾ ತಂಡಗಳೂ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಪುವಾ ನ್ಯೂ ಗಿನಿಯಾ ತಂಡವು 19.4 ಓವರ್​ಗಳಲ್ಲಿ 78 ರನ್​ಗಳಿಸಿ ಆಲೌಟ್ ಆಗಿದೆ.

3 / 7
ಹೀಗೆ ಪಪುವಾ ನ್ಯೂ ಗಿನಿಯಾ ತಂಡವು ಅಲ್ಪ ಮೊತ್ತಕ್ಕೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದು ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್. ಏಕೆಂದರೆ ಈ ಪಂದ್ಯದಲ್ಲಿ ಫರ್ಗುಸನ್ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದರಲ್ಲೇನು ವಿಶೇಷ ಎಂದರೆ....

4 / 7
ಲಾಕಿ ಫರ್ಗುಸನ್ ಒಂದೇ ಒಂದು ರನ್ ನೀಡದೇ 3 ವಿಕೆಟ್ ಕಬಳಿಸಿರುವುದು. ಅಂದರೆ 4 ಓವರ್​ಗಳನ್ನು ಎಸೆದಿದ್ದ ಫರ್ಗುಸನ್ ಯಾವುದೇ ರನ್ ನೀಡದೇ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ 4 ಓವರ್​ಗಳಲ್ಲಿ ಒಂದೇ ಒಂದು ರನ್ ನೀಡದ ಮೊದಲ ಬೌಲರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 7
ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ 4 ಓವರ್​ಗಳಲ್ಲಿ 0 ರನ್​ಗೆ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನೂ ಸಹ ಲಾಕಿ ಫರ್ಗುಸನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಾದ್ ಬಿನ್ ಝಫರ್ ಹೆಸರಿನಲ್ಲಿತ್ತು.

6 / 7
2021 ರಲ್ಲಿ ಪನಾಮ ವಿರುದ್ಧದ ಪಂದ್ಯದಲ್ಲಿ ಕೆನಡಾ ಬೌಲರ್ ಸಾದ್ ಬಿನ್ ಝಫರ್ 4 ಓವರ್​ಗಳಲ್ಲಿ ಯಾವುದೇ ರನ್ ನೀಡದೇ 2 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ನ್ಯೂಝಿಲೆಂಡ್ ತಂಡ ಬಲಗೈ ವೇಗಿ ಮುರಿದಿದ್ದಾರೆ.

7 / 7
ಪಪುವಾ ನ್ಯೂ ಗಿನಿಯಾ ವಿರುದ್ಧದ ಪಂದ್ಯದಲ್ಲಿ 4 ಮೇಡನ್ ಓವರ್​ಗಳನ್ನು ಎಸೆದಿರುವ ಲಾಕಿ ಫರ್ಗಸನ್ 0 ರನ್​ಗೆ 3 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಶೂನ್ಯ ರನ್​ಗೆ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.