- Kannada News Photo gallery Cricket photos T20 World Cup 2024: Nicholas Pooran Breaks Chris Gayle Record
Nicholas Pooran: ಪೂರನ್ ಸಿಡಿಲಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ
T20 World Cup 2024: ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ನಿಕೋಲಸ್ ಪೂರನ್ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ 53 ಎಸೆತಗಳನ್ನು ಎದುರಿಸಿದ ಪೂರನ್ 8 ಭರ್ಜರಿ ಸಿಕ್ಸರ್ನೊಂದಿಗೆ 98 ರನ್ ಬಾರಿಸಿ ಶತಕ ವಂಚಿತರಾಗಿದ್ದರು. ಇದಾಗ್ಯೂ ಈ 98 ರನ್ಗಳೊಂದಿಗೆ ಎರಡು ಭರ್ಜರಿ ದಾಖಲೆ ಬರೆಯುವಲ್ಲಿ ಪೂರನ್ ಯಶಸ್ವಿಯಾಗಿದ್ದಾರೆ.
Updated on: Jun 18, 2024 | 7:30 PM

T20 World Cup 2024: ಟಿ20 ವಿಶ್ವಕಪ್ನ 40ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ನಿಕೋಲಸ್ ಪೂರನ್ (Nicholas Pooran) ಹಲವು ದಾಖಲೆ ನಿರ್ಮಿಸಿದ್ದಾರೆ. ಅದರಲ್ಲೂ ದಾಖಲೆಗಳ ಸರದಾರ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಎರಡು ದಾಖಲೆಗಳನ್ನು ಪೂರನ್ ಅಳಿಸಿ ಹಾಕಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಅಫ್ಘಾನಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ನಿಕೋಲಸ್ ಪೂರನ್ 53 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 98 ರನ್ ಸಿಡಿಸಿದ್ದರು. ಈ ಎಂಟು ಸಿಕ್ಸರ್ಗಳೊಂದಿಗೆ ಪೂರನ್ ವಿಂಡೀಸ್ನ ಸಿಕ್ಸರ್ ಸರದಾರ ಎನಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ ಪರ 79 ಟಿ20 ಪಂದ್ಯಗಳನ್ನಾಡಿರುವ ಯೂನಿವರ್ಸ್ ಬಾಸ್ ಖ್ಯಾತಿಯ ಗೇಲ್ ಒಟ್ಟು 124 ಸಿಕ್ಸ್ಗಳನ್ನು ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಪೂರನ್ ಯಶಸ್ವಿಯಾಗಿದ್ದಾರೆ.

ವೆಸ್ಟ್ ಇಂಡೀಸ್ ಪರ ಈವರೆಗೆ 92 ಟಿ20 ಪಂದ್ಯಗಳನ್ನಾಡಿರುವ ನಿಕೋಲಸ್ ಪೂರನ್ ಒಟ್ಟು 128 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ ಪರ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ 98 ರನ್ಗಳಿಸುವುದರೊಂದಿಗೆ ವೆಸ್ಟ್ ಇಂಡೀಸ್ ಪರ ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಪೂರನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಗೇಲ್ ಹೆಸರಿನಲ್ಲಿತ್ತು.

ಕ್ರಿಸ್ ಗೇಲ್ 79 ಟಿ20 ಪಂದ್ಯಗಳಲ್ಲಿ ಒಟ್ಟು 1899 ರನ್ ಕಲೆಹಾಕಿದ್ದರು. ಇದೀಗ ನಿಕೋಲಸ್ ಪೂರನ್ 84 ಟಿ20 ಇನಿಂಗ್ಸ್ಗಳಿಂದ ಒಟ್ಟು 2012 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಂಡೀಸ್ ಪರ ಟಿ20 ಕ್ರಿಕೆಟ್ನಲ್ಲಿ 2 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




