AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nicholas Pooran: ಪೂರನ್​ ಪವರ್​ಗೆ ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್

T20 World Cup 2024: ವೆಸ್ಟ್ ಇಂಡೀಸ್ ಪರ ಈವರೆಗೆ 93 ಟಿ20 ಪಂದ್ಯಗಳನ್ನಾಡಿರುವ ನಿಕೋಲಸ್ ಪೂರನ್ ಒಟ್ಟು 131 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಸಿಕ್ಸ್​ಗಳೊಂದಿಗೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಎರಡು ದಾಖಲೆಗಳನ್ನು ಎಡಗೈ ದಾಂಡಿಗ ಪೂರನ್ ಮುರಿದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ಪರ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ,

ಝಾಹಿರ್ ಯೂಸುಫ್
|

Updated on: Jun 22, 2024 | 2:53 PM

Share
T20 World Cup 2024: ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್ ತಂಡದ ಎಡಗೈ ದಾಂಡಿಗ ನಿಕೋಲಸ್ ಪೂರನ್ (Nicholas Pooran) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಟಿ20 ಕ್ರಿಕೆಟ್​ನ ದಾಖಲೆಗಳ ಸರದಾರ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಉಡೀಸ್ ಮಾಡುವ ಮೂಲಕ ಎಂಬುದು ವಿಶೇಷ.

1 / 7
ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ ಮೈದಾನದಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ 12 ಎಸೆತಗಳಲ್ಲಿ 27 ರನ್​ ಚಚ್ಚಿದ್ದರು. ಈ ಸ್ಪೋಟಕ ಇನಿಂಗ್ಸ್​ನಲ್ಲಿ ಪೂರನ್ ಬ್ಯಾಟ್​ನಿಂದ 1 ಫೋರ್ ಹಾಗೂ 3 ಭರ್ಜರಿ ಸಿಕ್ಸ್​ಗಳು ಮೂಡಿಬಂದಿತ್ತು.

2 / 7
ಈ ಮೂರು ಸಿಕ್ಸ್​ಗಳೊಂದಿಗೆ ಇದೀಗ ಟಿ20 ವಿಶ್ವಕಪ್​ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ನಿಕೋಲಸ್ ಪೂರನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

3 / 7
2012 ರ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್ ಪರ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಕ್ರಿಸ್ ಗೇಲ್ ಬರೋಬ್ಬರಿ 16 ಸಿಕ್ಸ್​ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 12 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಪೂರನ್ ಯಶಸ್ವಿಯಾಗಿದ್ದಾರೆ.

4 / 7
ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 6 ಇನಿಂಗ್ಸ್ ಆಡಿರುವ ನಿಕೋಲಸ್ ಪೂರನ್ ಒಟ್ಟು 153 ಎಸೆತಗಳಲ್ಲಿ 227 ರನ್ ಕಲೆಹಾಕಿದ್ದಾರೆ. ಈ ವೇಳೆ 15 ಫೋರ್ ಮತ್ತು 17 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಹದಿನೇಳು ಸಿಕ್ಸ್​ಗಳೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

5 / 7
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಕೂಡ ಪೂರನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ ಪರ 79 ಟಿ20 ಪಂದ್ಯಗಳನ್ನಾಡಿರುವ ಗೇಲ್ ಒಟ್ಟು 124 ಸಿಕ್ಸ್​ಗಳನ್ನು ಬಾರಿಸಿ ಈ ದಾಖಲೆ ಬರೆದಿದ್ದರು.

6 / 7
ಈ ದಾಖಲೆ ಮುರಿಯುವಲ್ಲಿಯೂ ಪೂರನ್ ಯಶಸ್ವಿಯಾಗಿದ್ದಾರೆ. ವೆಸ್ಟ್ ಇಂಡೀಸ್ ಪರ ಈವರೆಗೆ 93 ಟಿ20 ಪಂದ್ಯಗಳನ್ನಾಡಿರುವ ನಿಕೋಲಸ್ ಪೂರನ್ ಒಟ್ಟು 131 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ವೆಸ್ಟ್ ಇಂಡೀಸ್ ಪರ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

7 / 7
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್