Nicholas Pooran: ಪೂರನ್ ಪವರ್ಗೆ ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್
T20 World Cup 2024: ವೆಸ್ಟ್ ಇಂಡೀಸ್ ಪರ ಈವರೆಗೆ 93 ಟಿ20 ಪಂದ್ಯಗಳನ್ನಾಡಿರುವ ನಿಕೋಲಸ್ ಪೂರನ್ ಒಟ್ಟು 131 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಸಿಕ್ಸ್ಗಳೊಂದಿಗೆ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಎರಡು ದಾಖಲೆಗಳನ್ನು ಎಡಗೈ ದಾಂಡಿಗ ಪೂರನ್ ಮುರಿದಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ ಪರ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ,
1 / 7
T20 World Cup 2024: ಟಿ20 ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ತಂಡದ ಎಡಗೈ ದಾಂಡಿಗ ನಿಕೋಲಸ್ ಪೂರನ್ (Nicholas Pooran) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಟಿ20 ಕ್ರಿಕೆಟ್ನ ದಾಖಲೆಗಳ ಸರದಾರ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಉಡೀಸ್ ಮಾಡುವ ಮೂಲಕ ಎಂಬುದು ವಿಶೇಷ.
2 / 7
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಯುಎಸ್ಎ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ 12 ಎಸೆತಗಳಲ್ಲಿ 27 ರನ್ ಚಚ್ಚಿದ್ದರು. ಈ ಸ್ಪೋಟಕ ಇನಿಂಗ್ಸ್ನಲ್ಲಿ ಪೂರನ್ ಬ್ಯಾಟ್ನಿಂದ 1 ಫೋರ್ ಹಾಗೂ 3 ಭರ್ಜರಿ ಸಿಕ್ಸ್ಗಳು ಮೂಡಿಬಂದಿತ್ತು.
3 / 7
ಈ ಮೂರು ಸಿಕ್ಸ್ಗಳೊಂದಿಗೆ ಇದೀಗ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ನಿಕೋಲಸ್ ಪೂರನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.
4 / 7
2012 ರ ಟಿ20 ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ಪರ ಆರಂಭಿಕನಾಗಿ ಬ್ಯಾಟ್ ಬೀಸಿದ್ದ ಕ್ರಿಸ್ ಗೇಲ್ ಬರೋಬ್ಬರಿ 16 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 12 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಪೂರನ್ ಯಶಸ್ವಿಯಾಗಿದ್ದಾರೆ.
5 / 7
ಈ ಬಾರಿಯ ಟಿ20 ವಿಶ್ವಕಪ್ನಲ್ಲಿ 6 ಇನಿಂಗ್ಸ್ ಆಡಿರುವ ನಿಕೋಲಸ್ ಪೂರನ್ ಒಟ್ಟು 153 ಎಸೆತಗಳಲ್ಲಿ 227 ರನ್ ಕಲೆಹಾಕಿದ್ದಾರೆ. ಈ ವೇಳೆ 15 ಫೋರ್ ಮತ್ತು 17 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಹದಿನೇಳು ಸಿಕ್ಸ್ಗಳೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
6 / 7
ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಕೂಡ ಪೂರನ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್ ಪರ 79 ಟಿ20 ಪಂದ್ಯಗಳನ್ನಾಡಿರುವ ಗೇಲ್ ಒಟ್ಟು 124 ಸಿಕ್ಸ್ಗಳನ್ನು ಬಾರಿಸಿ ಈ ದಾಖಲೆ ಬರೆದಿದ್ದರು.
7 / 7
ಈ ದಾಖಲೆ ಮುರಿಯುವಲ್ಲಿಯೂ ಪೂರನ್ ಯಶಸ್ವಿಯಾಗಿದ್ದಾರೆ. ವೆಸ್ಟ್ ಇಂಡೀಸ್ ಪರ ಈವರೆಗೆ 93 ಟಿ20 ಪಂದ್ಯಗಳನ್ನಾಡಿರುವ ನಿಕೋಲಸ್ ಪೂರನ್ ಒಟ್ಟು 131 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ವೆಸ್ಟ್ ಇಂಡೀಸ್ ಪರ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.