AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಿಂದ 2 ತಂಡಗಳು ಔಟ್

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ ಜಯಗಳಿಸಿದರೆ ಸೂಪರ್-8 ಹಂತಕ್ಕೇರುವುದು ಖಚಿತವಾಗಲಿದೆ. ಅತ್ತ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಯುಎಸ್​ಎ ತಂಡಕ್ಕೂ ಮುಂದಿನ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಬುಧವಾರ ನಡೆಯಲಿರುವ ಪಂದ್ಯದಲ್ಲಿ ಉತ್ತಮ ಪೈಪೋಟಿ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on:Jun 12, 2024 | 8:14 AM

Share
T20 World Cup 2024: 20 ವಿಶ್ವಕಪ್​​ನ 24 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ 2 ತಂಡಗಳು ಸೂಪರ್-8 ಹಂತಕ್ಕೇರಿದರೆ, ಮತ್ತೆರಡು ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ. ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನ ಟಿ20 ವಿಶ್ವಕಪ್​ನಿಂದ ಹೊರಬಿದ್ದ ತಂಡಗಳಾವುವು, ಮುಂದಿನ ಹಂತಕ್ಕೇರಿದ ಟೀಮ್​ಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 5
ಗ್ರೂಪ್-ಬಿ ನಲ್ಲಿ ಕಾಣಿಸಿಕೊಂಡಿದ್ದ ಒಮಾನ್ ತಂಡವು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿದೆ. ಈ ಸೋಲುಗಳೊಂದಿಗೆ ಒಮಾನ್ ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ತನ್ನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯದೊಂದಿಗೆ ಒಮಾನ್ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

2 / 5
ಮತ್ತೊಂದೆಡೆ ಗ್ರೂಪ್-ಡಿ ನಲ್ಲಿರುವ ಶ್ರೀಲಂಕಾ ತಂಡದ ವಿಶ್ವಕಪ್ ಅಭಿಯಾನ ಕೂಡ ಮುಂದಿನ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಲಂಕಾ ತಂಡವು ಆಡಿರುವ 3 ಪಂದ್ಯಗಳಲ್ಲಿ 2 ಸೋಲನುಭವಿಸಿದೆ. ಇನ್ನು ನೇಪಾಳ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಕೇವಲ 1 ಅಂಕ ಪಡೆದುಕೊಂಡಿದೆ. ಅತ್ತ ತಲಾ 2 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ತಂಡಗಳು ಮುಂದಿನ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಯಾವುದೇ ತಂಡ ಗೆದ್ದರೂ ಶ್ರೀಲಂಕಾ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

3 / 5
ಗ್ರೂಪ್-ಡಿ ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಇನ್ನು ಸೌತ್ ಆಫ್ರಿಕಾ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದ್ದು, ಈ ಮ್ಯಾಚ್​ನಲ್ಲಿ ಸೋತರೂ ಐಡೆನ್ ಮಾರ್ಕ್ರಾಮ್ ಪಡೆ ಮುಂದಿನ ಹಂತದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

4 / 5
ಗ್ರೂಪ್​-ಬಿ ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ತಂಡ ಕೂಡ ಸೂಪರ್-8 ರಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿದೆ. ಆಡಿರುವ ಮೂರು ಮ್ಯಾಚ್​ಗಳಲ್ಲೂ ಆಸೀಸ್ ಪಡೆ ಜಯ ಸಾಧಿಸಿದ್ದು, ಈ ಮೂಲಕ ಸ್ಕಾಟ್ಲೆಂಡ್ ವಿರುದ್ಧದ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ.

5 / 5

Published On - 8:12 am, Wed, 12 June 24

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?

ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್

‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’

ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!

ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್