AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pat Cummins: 2 ಹ್ಯಾಟ್ರಿಕ್ಸ್: ವಿಶ್ವ ದಾಖಲೆ ನಿರ್ಮಿಸಿದ ಕಮಿನ್ಸ್

T20 World Cup 2024: ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಟ್ಟು 7 ಬೌಲರ್​ಗಳು ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಅದರಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಏಕೈಕ ಬೌಲರ್ ಪ್ಯಾಟ್ ಕಮಿನ್ಸ್. ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಸತತ 3 ವಿಕೆಟ್ ಕಬಳಿಸಿದ್ದ ಕಮಿನ್ಸ್ ಇದೀಗ ಮತ್ತೊಮ್ಮೆ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 23, 2024 | 8:00 AM

Share
T20 World Cup 2024: ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಆಟಗಾರ ಪ್ಯಾಟ್ ಕಮಿನ್ಸ್ (Pat Cummins) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ 2 ಬಾರಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಏಕೈಕ ಬೌಲರ್ ಎಂಬ ದಾಖಲೆ ಪ್ಯಾಟ್ ಕಮಿನ್ಸ್ ಪಾಲಾಗಿದೆ.

1 / 5
ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 29 ರನ್ ನೀಡಿದ್ದ ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲೂ ಹ್ಯಾಟ್ರಿಕ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 5
ಸೇಂಟ್ ವಿನ್ಸೆಂಟ್ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಮಿನ್ಸ್ 18ನೇ ಓವರ್​ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಅವರ ವಿಕೆಟ್ ಕಬಳಿಸಿದ್ದರು. ಇನ್ನು 20ನೇ ಓವರ್​ನ ಮೊದಲೆರಡು ಎಸೆತಗಳಲ್ಲಿ ಕರೀಮ್ ಜನ್ನತ್, ಹಾಗೂ ಗುಲ್ಬದ್ದೀನ್ ನೈಬ್ ವಿಕೆಟ್ ಕಬಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

3 / 5
ಈ ಮೂಲಕ ಟಿ20 ವಿಶ್ವಕಪ್​ನಲ್ಲಿ 2 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಾಗೆಯೇ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ 7ನೇ ಬೌಲರ್ ಎಂಬ ಹಿರಿಮೆಯನ್ನೂ ತಮ್ಮದಾಗಿಸಿಕೊಂಡರು.

4 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 148 ರನ್ ಕಲೆಹಾಕಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 149 ರನ್​ಗಳ ಗುರಿ ನೀಡಿದೆ. (ALL PC- ICC/GettyImages)

5 / 5

Published On - 7:59 am, Sun, 23 June 24

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು

‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ

ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ

ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ

ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು

CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ

ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು

ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ

‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ