Pat Cummins: 2 ಹ್ಯಾಟ್ರಿಕ್ಸ್: ವಿಶ್ವ ದಾಖಲೆ ನಿರ್ಮಿಸಿದ ಕಮಿನ್ಸ್
T20 World Cup 2024: ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಟ್ಟು 7 ಬೌಲರ್ಗಳು ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಅದರಲ್ಲಿ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಏಕೈಕ ಬೌಲರ್ ಪ್ಯಾಟ್ ಕಮಿನ್ಸ್. ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಸತತ 3 ವಿಕೆಟ್ ಕಬಳಿಸಿದ್ದ ಕಮಿನ್ಸ್ ಇದೀಗ ಮತ್ತೊಮ್ಮೆ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದಾರೆ.
1 / 5
T20 World Cup 2024: ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ಆಟಗಾರ ಪ್ಯಾಟ್ ಕಮಿನ್ಸ್ (Pat Cummins) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಎರಡು ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ 2 ಬಾರಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಏಕೈಕ ಬೌಲರ್ ಎಂಬ ದಾಖಲೆ ಪ್ಯಾಟ್ ಕಮಿನ್ಸ್ ಪಾಲಾಗಿದೆ.
2 / 5
ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 4 ಓವರ್ಗಳಲ್ಲಿ 29 ರನ್ ನೀಡಿದ್ದ ಪ್ಯಾಟ್ ಕಮಿನ್ಸ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲೂ ಹ್ಯಾಟ್ರಿಕ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
3 / 5
ಸೇಂಟ್ ವಿನ್ಸೆಂಟ್ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕಮಿನ್ಸ್ 18ನೇ ಓವರ್ನ ಕೊನೆಯ ಎಸೆತದಲ್ಲಿ ರಶೀದ್ ಖಾನ್ ಅವರ ವಿಕೆಟ್ ಕಬಳಿಸಿದ್ದರು. ಇನ್ನು 20ನೇ ಓವರ್ನ ಮೊದಲೆರಡು ಎಸೆತಗಳಲ್ಲಿ ಕರೀಮ್ ಜನ್ನತ್, ಹಾಗೂ ಗುಲ್ಬದ್ದೀನ್ ನೈಬ್ ವಿಕೆಟ್ ಕಬಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
4 / 5
ಈ ಮೂಲಕ ಟಿ20 ವಿಶ್ವಕಪ್ನಲ್ಲಿ 2 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹಾಗೆಯೇ ಟಿ20 ವಿಶ್ವಕಪ್ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ 7ನೇ ಬೌಲರ್ ಎಂಬ ಹಿರಿಮೆಯನ್ನೂ ತಮ್ಮದಾಗಿಸಿಕೊಂಡರು.
5 / 5
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 148 ರನ್ ಕಲೆಹಾಕಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 149 ರನ್ಗಳ ಗುರಿ ನೀಡಿದೆ. (ALL PC- ICC/GettyImages)
Published On - 7:59 am, Sun, 23 June 24