Phil Salt: 6,6,6,6,6: ಹೊಸ ದಾಖಲೆ ಬರೆದ ಫಿಲ್ ಸಾಲ್ಟ್
T20 World Cup 2024: ಇಂಗ್ಲೆಂಡ್ ತಂಡವು ಸೂಪರ್-8 ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ. ಸೇಂಟ್ ಲೂಸಿಯಾದ ಡಾರೆನ್ ಸ್ಯಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 180 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 17.3 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 8 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.
1 / 6
T20 World Cup 2024: ಟಿ20 ವಿಶ್ವಕಪ್ನ 42ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ನೊಂದಿಗೆ ಫಿಲ್ ಸಾಲ್ಟ್ (Phil Salt) ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಇಯಾನ್ ಮೋರ್ಗನ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 6
ಸೇಂಟ್ ಲೂಸಿಯಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಈ ಪಂದ್ಯದಲ್ಲಿ 181 ರನ್ಗಳನ್ನು ಚೇಸ್ ಮಾಡಿದ ಇಂಗ್ಲೆಂಡ್ ತಂಡಕ್ಕೆ ಫಿಲ್ ಸಾಲ್ಟ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಸಾಲ್ಟ್ ವಿಂಡೀಸ್ ಬೌಲರ್ಗಳ ಬೆಂಡೆತ್ತಿದರು.
3 / 6
ಪರಿಣಾಮ ಫಿಲ್ ಸಾಲ್ಟ್ ಬ್ಯಾಟ್ನಿಂದ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್ಗಳು ಮೂಡಿಬಂದವು. ಅಲ್ಲದೆ ಕೇವಲ 47 ಎಸೆತಗಳಲ್ಲಿ ಅಜೇಯ 87 ರನ್ ಬಾರಿಸಿ ಇಂಗ್ಲೆಂಡ್ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು.
4 / 6
ವಿಶೇಷ ಎಂದರೆ ಈ ಪಂದ್ಯದಲ್ಲಿ ಬಾರಿಸಿದ 5 ಭರ್ಜರಿ ಸಿಕ್ಸ್ನೊಂದಿಗೆ ಇಂಗ್ಲೆಂಡ್ ಪರ ಟಿ20 ಕ್ರಿಕೆಟ್ನಲ್ಲಿ ಒಂದೇ ತಂಡದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯೊಂದು ಫಿಲ್ ಸಾಲ್ಟ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಇಯಾನ್ ಮೋರ್ಗನ್ ಹೆಸರಿನಲ್ಲಿತ್ತು.
5 / 6
ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮೋರ್ಗನ್ ನ್ಯೂಝಿಲೆಂಡ್ ವಿರುದ್ಧ 26 ಸಿಕ್ಸ್ಗಳನ್ನು ಸಿಡಿಸುವ ಮೂಲಕ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಸಾಲ್ಟ್ ಅಳಿಸಿ ಹಾಕಿದ್ದಾರೆ.
6 / 6
ವೆಸ್ಟ್ ಇಂಡೀಸ್ ವಿರುದ್ಧ ಟಿ20 ಕ್ರಿಕೆಟ್ನಲ್ಲಿ 9 ಇನಿಂಗ್ಸ್ ಆಡಿರುವ ಫಿಲ್ ಸಾಲ್ಟ್ ಒಟ್ಟು 32 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ ಒಂದೇ ತಂಡದ ವಿರುದ್ಧ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಫಿಲ್ ಸಾಲ್ಟ್ ತಮ್ಮದಾಗಿಸಿಕೊಂಡಿದ್ದಾರೆ.