Rashid Khan: ವಿಶೇಷ ವಿಶ್ವ ದಾಖಲೆ ಬರೆದ ರಶೀದ್ ಖಾನ್

T20 World Cup 2024: ಟಿ20 ವಿಶ್ವಕಪ್​ನ 14ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ಅಮೋಘ ಗೆಲುವು ಸಾಧಿಸಿದೆ. ಗಯಾನಾದಲ್ಲಿ ನಡೆದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 160 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು ಕೇವಲ 75 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್​ಗಳ ಭರ್ಜರಿ ಜಯ ಸಾಧಿಸಿದೆ.

|

Updated on: Jun 08, 2024 | 9:54 AM

T20 World Cup 2024: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ (Rashid Khan) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ನ್ಯೂಝಿಲೆಂಡ್​ನ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 159 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ರಶೀದ್ ಖಾನ್ ಮಾರಕವಾಗಿ ಪರಿಣಮಿಸಿದ್ದರು. 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ರಶೀದ್ ಕೇವಲ 17 ರನ್​ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.

2 / 6
ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕನೆಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಡೇನಿಯಲ್ ವೆಟ್ಟೋರಿ ಹೆಸರಿನಲ್ಲಿತ್ತು.

3 / 6
2007ರ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ನಾಯಕ ಡೇನಿಯಲ್ ವೆಟ್ಟೋರಿ ಟೀಮ್ ಇಂಡಿಯಾ ವಿರುದ್ಧ ಕೇವಲ 20 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಕಬಳಿಸಿದ ಕ್ಯಾಪ್ಟನ್ ಎಂಬ ದಾಖಲೆ ಬರೆದಿದ್ದರು.

4 / 6
ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ರಶೀದ್ ಖಾನ್ ಈ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಉರುಳಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್​ ಕಲೆಹಾಕಿತು. 160 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 15.2 ಓವರ್​ಗಳಲ್ಲಿ ಕೇವಲ 75 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್​ಗಳ ಭರ್ಜರಿ ಜಯ ಸಾಧಿಸಿದೆ. (ALL PC: ICC/Getty Images)

6 / 6
Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು

ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ

ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ

ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ

ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ

ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ

ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ

ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?

ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ