Rashid Khan: ವಿಶೇಷ ವಿಶ್ವ ದಾಖಲೆ ಬರೆದ ರಶೀದ್ ಖಾನ್
T20 World Cup 2024: ಟಿ20 ವಿಶ್ವಕಪ್ನ 14ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ಅಮೋಘ ಗೆಲುವು ಸಾಧಿಸಿದೆ. ಗಯಾನಾದಲ್ಲಿ ನಡೆದ ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 160 ರನ್ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು ಕೇವಲ 75 ರನ್ಗಳಿಗೆ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್ಗಳ ಭರ್ಜರಿ ಜಯ ಸಾಧಿಸಿದೆ.
1 / 6
T20 World Cup 2024: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ (Rashid Khan) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ನ್ಯೂಝಿಲೆಂಡ್ನ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.
2 / 6
ಈ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನೀಡಿದ 159 ರನ್ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ರಶೀದ್ ಖಾನ್ ಮಾರಕವಾಗಿ ಪರಿಣಮಿಸಿದ್ದರು. 4 ಓವರ್ಗಳನ್ನು ಬೌಲಿಂಗ್ ಮಾಡಿದ್ದ ರಶೀದ್ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು.
3 / 6
ಇದರೊಂದಿಗೆ ಟಿ20 ವಿಶ್ವಕಪ್ನಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ನಾಯಕನೆಂಬ ವಿಶ್ವ ದಾಖಲೆ ರಶೀದ್ ಖಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಡೇನಿಯಲ್ ವೆಟ್ಟೋರಿ ಹೆಸರಿನಲ್ಲಿತ್ತು.
4 / 6
2007ರ ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ನಾಯಕ ಡೇನಿಯಲ್ ವೆಟ್ಟೋರಿ ಟೀಮ್ ಇಂಡಿಯಾ ವಿರುದ್ಧ ಕೇವಲ 20 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಕಬಳಿಸಿದ ಕ್ಯಾಪ್ಟನ್ ಎಂಬ ದಾಖಲೆ ಬರೆದಿದ್ದರು.
5 / 6
ಇದೀಗ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 17 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ರಶೀದ್ ಖಾನ್ ಈ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್ನಲ್ಲಿ ಅತೀ ಕಡಿಮೆ ರನ್ ನೀಡಿ 4 ವಿಕೆಟ್ ಉರುಳಿಸಿದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
6 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. 160 ರನ್ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 15.2 ಓವರ್ಗಳಲ್ಲಿ ಕೇವಲ 75 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ 84 ರನ್ಗಳ ಭರ್ಜರಿ ಜಯ ಸಾಧಿಸಿದೆ. (ALL PC: ICC/Getty Images)