AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾ ಸಿಕ್ಸ್​ಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

T20 World Cup 2024: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೂರು ಭರ್ಜರಿ ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳೊಂದಿಗೆ ಕ್ರಿಸ್ ಗೇಲ್ ಹಾಗೂ ಮಹೇಲ ಜಯವರ್ಧನೆ ಹೆಸರಿನಲ್ಲಿದ್ದ ವಿಶ್ವ ದಾಖಲೆಗಳನ್ನು ಮುರಿದಿದ್ದಾರೆ. ರೋಹಿತ್ ಶರ್ಮಾ ಬರೆದಿರುವ ಹೊಸ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Jun 28, 2024 | 10:09 AM

Share
T20 World Cup 2024: ಟಿ20 ವಿಶ್ವಕಪ್​ನ 2ನೇ ಸೆಮಿಫೈನಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಹಿಟ್​ಮ್ಯಾನ್ 39 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 57 ರನ್ ಬಾರಿಸಿದ್ದರು.

1 / 6
ಈ ಎರಡು ಸಿಕ್ಸ್​ಗಳೊಂದಿಗೆ ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ರೋಹಿತ್ ಶರ್ಮಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

2 / 6
ವೆಸ್ಟ್ ಇಂಡೀಸ್ ಪರ ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ​ ಮತ್ತು ಏಕದಿನ ವಿಶ್ವಕಪ್ ನಾಕೌಟ್ ಪಂದ್ಯಗಳನ್ನಾಡಿರುವ ಕ್ರಿಸ್ ಗೇಲ್ ಒಟ್ಟು 21 ಸಿಕ್ಸ್​ಗಳನ್ನು ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಹಿಟ್​ಮ್ಯಾನ್ ಈ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

3 / 6
ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ, ಏಕದಿನ ವಿಶ್ವಕಪ್​ನಲ್ಲಿ ನಾಕೌಟ್ ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಈವರೆಗೆ 22 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಇದಲ್ಲದೆ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ವಿಶ್ವ ದಾಖಲೆ ಕೂಡ ರೋಹಿತ್ ಶರ್ಮಾ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ ಒಟ್ಟು 111 ಫೋರ್​ಗಳನ್ನು ಬಾರಿಸಿದ್ದರೆ, ಇದೀಗ ರೋಹಿತ್ ಶರ್ಮಾ 113 ಫೋರ್​ಗಳನ್ನು ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 6
ಹಾಗೆಯೇ ಟಿ20 ವಿಶ್ವಕಪ್​ನಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 31 ಇನಿಂಗ್ಸ್​ಗಳಲ್ಲಿ 63 ಸಿಕ್ಸ್ ಸಿಡಿಸಿರುವ ಕ್ರಿಸ್ ಗೇಲ್ ಅಗ್ರಸ್ಥಾನದಲ್ಲಿದ್ದರೆ, ಇದೀಗ 43 ಇನಿಂಗ್ಸ್​ಗಳಲ್ಲಿ 50 ಸಿಕ್ಸ್ ಪೂರೈಸಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನಕ್ಕೇರಿದ್ದಾರೆ.

6 / 6
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ