India vs Pakistan: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಚಿಂತೆ ದೂರ

T20 World Cup 2024: ಟಿ20 ವಿಶ್ವಕಪ್​ನ ತನ್ನ 2ನೇ ಪಂದ್ಯದಲ್ಲಿ ಕಣಕ್ಕಿಳಿಯಲು ಟೀಮ್ ಇಂಡಿಯಾ ಸಜ್ಜಾಗಿ ನಿಂತಿದೆ. ಭಾನುವಾರ (ಜೂ.9) ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

|

Updated on: Jun 08, 2024 | 8:59 AM

T20 World Cup 2024: ಭಾರತ ಮತ್ತು ಪಾಕಿಸ್ತಾನ್ (IND vs PAK) ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಜೂ.9) ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಈ ಮಹತ್ವದ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರಾ ಎಂಬ ಚಿಂತೆಯೊಂದು ಶುರುವಾಗಿತ್ತು.

1 / 6
ಏಕೆಂದರೆ ಐರ್ಲೆಂಡ್ ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಬ್ಯಾಟಿಂಗ್​ ವೇಳೆ ಭುಜ ಭಾಗಕ್ಕೆ ಚೆಂಡು ಬಡಿದಿದ್ದರಿಂದ ಹಿಟ್​ಮ್ಯಾನ್ ಅರ್ಧದಲ್ಲೇ ಮೈದಾನ ತೊರೆದಿದ್ದರು. ಈ ಪಂದ್ಯದ ಬಳಿಕ ಅವರು ಅಭ್ಯಾಸದಲ್ಲೂ ಕಾಣಿಸಿಕೊಂಡಿರಲಿಲ್ಲ.

2 / 6
ಆದರೆ ಶುಕ್ರವಾರ ನಡೆದ ಅಭ್ಯಾಸ ಶಿಬಿರದಲ್ಲಿ ಹಿಟ್​ಮ್ಯಾನ್ ಮತ್ತೆ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನೆಟ್ಸ್​​ನಲ್ಲೂ ಬ್ಯಾಟಿಂಗ್​ ಪ್ರಾಕ್ಟೀಸ್ ಮಾಡಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ಚೇತರಿಸಿಕೊಂಡಿರುವುದು ಖಚಿತವಾಗಿದೆ. ಹೀಗಾಗಿ ಪಾಕಿಸ್ತಾನ್ ವಿರುದ್ಧ ಹಿಟ್​ಮ್ಯಾನ್ ಕಣಕ್ಕಿಳಿಯುವುದು ಕನ್ಫರ್ಮ್ ಎನ್ನಬಹುದು.

3 / 6
ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಸೂಪರ್-8 ಹಂತಕ್ಕೇರುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

4 / 6
ಏಕೆಂದರೆ ಭಾರತ ತಂಡದ ಮುಂದಿನ ಪಂದ್ಯಗಳಿರುವುದು ಯುಎಸ್​ಎ ಮತ್ತು ಕೆನಡಾ ತಂಡಗಳ ವಿರುದ್ಧ. ಈ ಪಂದ್ಯಗಳಲ್ಲಿ ಭಾರತ ತಂಡದ ಗೆಲುವನ್ನು ಎದುರು ನೋಡಬಹುದು. ಹೀಗಾಗಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಭಾರತ ಟಿ20 ವಿಶ್ವಕಪ್​ನ ಮುಂದಿನ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 6
ಭಾರತ ಟಿ20​ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.||| ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

6 / 6
Follow us
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು

ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು

ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್

ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?

ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ

ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..

ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ

ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ

ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?

ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ