T20 World Cup 2024: ಎರಡು ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ರೂಬೆನ್

T20 World Cup 2024: ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 2634 ಪಂದ್ಯಗಳನ್ನಾಡಲಾಗಿದೆ. ಆದರೆ ಈವರೆಗೆ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ನಮೀಬಿಯಾ ಬೌಲರ್ ನಿರ್ಮಿಸಿದ್ದಾರೆ. ಅದು ಕೂಡ ಮೊದಲ ಓವರ್​ನ ಮೊದಲೆರಡು ಎಸೆತಗಳ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

|

Updated on:Jun 03, 2024 | 8:03 AM

T20 World Cup 2024: ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ರೂಬೆನ್ ಟ್ರಂಪೆಲ್ಮನ್ (Ruben Trumpelmann) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ.

1 / 5
ಬಾರ್ಬಡೋಸ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ 3ನೇ ಪಂದ್ಯದಲ್ಲಿ ಒಮಾನ್ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಟಾಸ್ ಗೆದ್ದ ನಮೀಬಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಓವರ್​ ಎಸೆದ ರೂಬೆನ್ ಟ್ರಂಪೆಲ್ಮನ್ ಮೊದಲ ಎರಡು ಎಸೆತಗಳಲ್ಲೇ ಒಮಾನ್ ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು.

2 / 5
ಮೊದಲ ಓವರ್​ನ ಮೊದಲ ಎಸೆತದಲ್ಲಿ ಆರಂಭಿಕ ಆಟಗಾರ ಕಶ್ಯಪ್ ಪ್ರಜಾಪತಿ (0) ಯನ್ನು ಎಲ್​ಬಿಡಬ್ಲ್ಯೂ ಮಾಡಿದ ರೂಬೆನ್ ಟ್ರಂಪೆಲ್ಮನ್, 2ನೇ ಎಸೆತದಲ್ಲಿ ಒಮಾನ್ ತಂಡದ ನಾಯಕ ಅಖಿಬ್ ಇಲ್ಯಾಸ್ (0) ವಿಕೆಟ್ ಪಡೆದರು. ಅಂದರೆ ಶೂನ್ಯಕ್ಕೆ 2 ವಿಕೆಟ್ ಉರುಳಿಸಿದರು.

3 / 5
ಇದರೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಮೊದಲ ಓವರ್​ನ ಮೊದಲೆರಡು ಎಸೆತಗಳಲ್ಲಿ ಎರಡು ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ರೂಬೆನ್ ಟ್ರಂಪೆಲ್ಮನ್ ಪಾಲಾಯಿತು. ಈ ಮೂಲಕ ಚುಟುಕು ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶೇಷ ದಾಖಲೆಯನ್ನು ರೂಬೆನ್ ತಮ್ಮದಾಗಿಸಿಕೊಂಡರು.

4 / 5
ಇನ್ನು ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ರೂಬೆನ್ ಟ್ರಂಪೆಲ್ಮನ್ 21 ರನ್​ಗಳನ್ನು ನೀಡುವ ಮೂಲಕ 4 ವಿಕೆಟ್ ಕಬಳಿಸಿದರು. ಹಾಗೆಯೇ ಡೇವಿಡ್ ವೀಝ 3.4 ಓವರ್​ಗಳಲ್ಲಿ 28 ರನ್ ನೀಡಿ 3 ವಿಕೆಟ್ ಪಡೆದರು. ನಮೀಬಿಯಾ ಬೌಲರ್​ಗಳ ಈ ಕರಾರುವಾಕ್ ದಾಳಿ ಪರಿಣಾಮ ಒಮಾನ್ ತಂಡವು 19.4 ಓವರ್​ಗಳಲ್ಲಿ 109 ರನ್​ಗಳಿಸಿ ಆಲೌಟ್ ಆಗಿದೆ. (All PC: getty images)

5 / 5

Published On - 7:58 am, Mon, 3 June 24

Follow us
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?

ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್

ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು

ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ

ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ

ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ

ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ