AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

South Africa: ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಸೌತ್ ಆಫ್ರಿಕಾ

T20 World Cup 2024: ಟಿ20 ವಿಶ್ವಕಪ್​ನ 50ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಮಡ 135 ರನ್ ಕಲೆಹಾಕಿದರೆ, ಮಳೆಯ ಕಾರಣ ಡರ್ಕ್​ವರ್ತ್​ ಲೂಯಿಸ್ ನಿಯಮದಂತೆ ಸೌತ್ ಆಪ್ರಿಕಾ ತಂಡಕ್ಕೆ 17 ಓವರ್​ಗಳಲ್ಲಿ 123 ರನ್​ಗಳ ಗುರಿ ಪಡೆಯಿತು. ಈ ಗುರಿಯನ್ನು 16.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಸೌತ್ ಆಫ್ರಿಕಾ 3 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 24, 2024 | 1:25 PM

Share
T20 World Cup 2024: ಟಿ20 ವಿಶ್ವಕಪ್ 2024ರಲ್ಲಿ ಸೌತ್ ಆಫ್ರಿಕಾ (South Africa) ತಂಡವು ಗೆಲುವಿನ ನಾಗಾಲೋಟ ಮುಂದುವರೆಸಿದೆ. ಮೊದಲ ಸುತ್ತಿನಲ್ಲಿ 4 ಪಂದ್ಯಗಳಲ್ಲಿ ವಿಜಯ ಸಾಧಿಸಿದ್ದ ಆಫ್ರಿಕನ್ನರು, ಇದೀಗ ದ್ವಿತೀಯ ಸುತ್ತಿನಲ್ಲೂ 3 ಗೆಲುವು ದಾಖಲಿಸಿದೆ. ಈ ಗೆಲುವುಗಳ ಮೂಲಕ ಸೌತ್ ಆಫ್ರಿಕಾ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ.

1 / 5
ವಿಶೇಷ ಎಂದರೆ ಈ 7 ಗೆಲುವುಗಳೊಂದಿಗೆ ಸೌತ್ ಆಫ್ರಿಕಾ ಟಿ20 ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತ ಗೆಲುವುಗಳ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದ ಆವೃತ್ತಿಯೊಂದರಲ್ಲಿ ಯಾವುದೇ ತಂಡ ಸತತ ಏಳು ಗೆಲುವು ಕಂಡಿಲ್ಲ.

2 / 5
2009 ರ ವಿಶ್ವಕಪ್​ನಲ್ಲಿ ಶ್ರೀಲಂಕಾ ತಂಡ ಸತತ 6 ಗೆಲುವು ದಾಖಲಿಸಿ ದಾಖಲೆ ಬರೆದಿತ್ತು. ಇದಾದ ಬಳಿಕ 2010 ರಲ್ಲಿ ಆಸ್ಟ್ರೇಲಿಯಾ ತಂಡ ಸತತ 6 ಜಯ ಸಾಧಿಸಿ ಈ ದಾಖಲೆಯನ್ನು ಸರಿಗಟ್ಟಿತ್ತು. ಇನ್ನು 2021 ರಲ್ಲೂ ಆಸ್ಟ್ರೇಲಿಯಾ 6 ಗೆಲುವುಗಳೊಂದಿಗೆ ಈ ದಾಖಲೆಯನ್ನು ಪುನರಾವರ್ತಿಸಿತ್ತು.

3 / 5
ಇದೀಗ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ತಂಡವೊಂದು ಸತತ 7 ಗೆಲುವು ದಾಖಲಿಸಿದೆ. ಈ ಮೂಲಕ ಕಳೆದ 8 ವಿಶ್ವಕಪ್ ಆವೃತ್ತಿಗಳಲ್ಲಿ ಯಾವುದೇ ತಂಡಕ್ಕೆ ಸಾಧ್ಯವಾಗದ ವಿಶೇಷ ದಾಖಲೆಯೊಂದನ್ನು ಸೌತ್ ಆಫ್ರಿಕಾ ನಿರ್ಮಿಸಿದೆ.

4 / 5
ಇನ್ನು ಟಿ20 ವಿಶ್ವಕಪ್​ ಇತಿಹಾಸದಲ್ಲಿ ಸತತವಾಗಿ ಅತೀ ಹೆಚ್ಚು ಗೆಲುವು ದಾಖಲಿಸಿದ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿದೆ. 2022-2024 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಸತತ 8 ಗೆಲುವು ದಾಖಲಿಸಿ ಈ ದಾಖಲೆ ನಿರ್ಮಿಸಿದೆ. ಇದೀಗ ಸತತ 7 ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡ ಸೆಮಿಫೈನಲ್ ಮತ್ತು ಫೈನಲ್​ನಲ್ಲಿ ಜಯಭೇರಿ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ

ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ