- Kannada News Photo gallery Cricket photos T20 World Cup 2024: Suryakumar Yadav Created Unwanted Record
Suryakumar Yadav: ಅರ್ಧಶತಕ ಸಿಡಿಸಿ ಅತ್ಯಂತ ಕೆಟ್ಟ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
T20 World Cup 2024: ಟಿ20 ವಿಶ್ವಕಪ್ನ 25ನೇ ಪಂದ್ಯದಲ್ಲಿ ಭಾರತ ತಂಡವು ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಸ್ಎ ತಂಡವು 20 ಓವರ್ಗಳಲ್ಲಿ 110 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನಿಂದ ಟೀಮ್ ಇಂಡಿಯಾ 18.2 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್ಗಳ ಗೆಲುವು ದಾಖಲಿಸಿದೆ.
Updated on: Jun 13, 2024 | 8:08 AM

T20 World Cup 2024: ಟಿ20 ವಿಶ್ವಕಪ್ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್ ಸೂರ್ಯಕುಮಾರ್ (Suryakumar Yadav) ಅರ್ಧಶತಕ ಬಾರಿಸಿ ಮಿಂಚಿದ್ದರು. ನ್ಯೂಯಾರ್ಕ್ನ ನಸ್ಸೌ ಕ್ರೀಡಾಂಗಣದಲ್ಲಿ ನಡೆದ ಯುಎಸ್ಎ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣ್ಕಕಿಳಿದ ಸೂರ್ಯ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ನಿಧಾನಗತಿಯಲ್ಲಿ ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್ನಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಕಳಪೆ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಆರಂಭಿಕ ಬ್ಯಾಟರ್ ಮುಹಮ್ಮದ್ ರಿಝ್ವಾನ್.

ಟಿ20 ವಿಶ್ವಕಪ್ 2024ರ ಕೆನಡಾ ವಿರುದ್ಧದ ಪಂದ್ಯದಲ್ಲಿ ಪಾಕ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಈ ಕಳಪೆ ದಾಖಲೆ ಬರೆದಿದ್ದಾರೆ. ಹಾಗೆಯೇ ನೆದರ್ಲೆಂಡ್ಸ್ ವಿರುದ್ಧ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಮಿಲ್ಲರ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಇದೀಗ 49 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಈ ಕಳಪೆ ದಾಖಲೆ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಅರ್ಧಶತಕ ಪೂರೈಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಭಾರತೀಯ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.




