Suryakumar Yadav: ಅರ್ಧಶತಕ ಸಿಡಿಸಿ ಅತ್ಯಂತ ಕೆಟ್ಟ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಭಾರತ ತಂಡವು ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 110 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನಿಂದ ಟೀಮ್ ಇಂಡಿಯಾ 18.2 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Jun 13, 2024 | 8:08 AM

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್ ಸೂರ್ಯಕುಮಾರ್ (Suryakumar Yadav) ಅರ್ಧಶತಕ ಬಾರಿಸಿ ಮಿಂಚಿದ್ದರು. ನ್ಯೂಯಾರ್ಕ್​ನ ನಸ್ಸೌ ಕ್ರೀಡಾಂಗಣದಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣ್ಕಕಿಳಿದ ಸೂರ್ಯ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ನಿಧಾನಗತಿಯಲ್ಲಿ ರನ್ ಕಲೆಹಾಕಿದ ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 5
ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಕಳಪೆ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಪಾಕಿಸ್ತಾನ್ ತಂಡದ ಆರಂಭಿಕ ಬ್ಯಾಟರ್ ಮುಹಮ್ಮದ್ ರಿಝ್ವಾನ್.

3 / 5
ಟಿ20 ವಿಶ್ವಕಪ್ 2024ರ ಕೆನಡಾ ವಿರುದ್ಧದ ಪಂದ್ಯದಲ್ಲಿ ಪಾಕ್ ಬ್ಯಾಟರ್ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಈ ಕಳಪೆ ದಾಖಲೆ ಬರೆದಿದ್ದಾರೆ. ಹಾಗೆಯೇ ನೆದರ್​ಲೆಂಡ್ಸ್​ ವಿರುದ್ಧ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಮಿಲ್ಲರ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

4 / 5
ಇದೀಗ 49 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸುವ ಮೂಲಕ ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಈ ಕಳಪೆ ದಾಖಲೆ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅರ್ಧಶತಕ ಪೂರೈಸಲು ಅತ್ಯಧಿಕ ಎಸೆತಗಳನ್ನು ತೆಗೆದುಕೊಂಡ ಭಾರತೀಯ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow us