T20 World Cup 2024: ಹಳೆಯ ದಾಖಲೆ ಅಳಿಸಿ ಹಾಕಿದ ಟೀಮ್ ಇಂಡಿಯಾ
T20 World Cup 2024: ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ 20 ಓವರ್ಗಳಲ್ಲಿ 146 ರನ್ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಟೀಮ್ ಇಂಡಿಯಾ 50 ರನ್ಗಳ ಜಯ ಸಾಧಿಸಿದೆ.
Updated on: Jun 23, 2024 | 3:00 PM

T20 World Cup 2024: ಟಿ20 ವಿಶ್ವಕಪ್ನ 47ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಅಂಟಿಗುವಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ (Team India) 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತ್ತು.

ಈ 196 ರನ್ಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳಿಂದ ಮೂಡಿಬಂದ ಒಟ್ಟು ಸಿಕ್ಸ್ಗಳ ಸಂಖ್ಯೆ 13. ರೋಹಿತ್ ಶರ್ಮಾ, ಸೂರ್ಯಕುಮಾರ್ ತಲಾ 1 ಸಿಕ್ಸ್ ಬಾರಿಸಿದರೆ, ರಿಷಭ್ ಪಂತ್ 2 ಸಿಕ್ಸ್ ಸಿಡಿಸಿದ್ದರು. ಇನ್ನು ವಿರಾಟ್ ಕೊಹ್ಲಿ, ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ತಲಾ 3 ಸಿಕ್ಸ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ ಬ್ಯಾಟರ್ಗಳು ಒಟ್ಟು 13 ಸಿಕ್ಸ್ಗಳನ್ನು ಸಿಡಿಸಿದ್ದಾರೆ.

ಈ ಹದಿಮೂರು ಸಿಕ್ಸ್ಗಳೊಂದಿಗೆ ಟೀಮ್ ಇಂಡಿಯಾ ತನ್ನದೇ ಹಳೆಯ ದಾಖಲೆಯನ್ನು ಅಳಿಸಿ ಹಾಕಿದೆ. ಅಂದರೆ ಭಾರತ ತಂಡವು ಟಿ20 ವಿಶ್ವಕಪ್ ಪಂದ್ಯವೊಂದರಲ್ಲಿ 11 ಸಿಕ್ಸ್ ಬಾರಿಸಿ ಈ ಹಿಂದೆ ದಾಖಲೆ ನಿರ್ಮಿಸಿತ್ತು.

2007 ರ ಟಿ20 ವಿಶ್ವಕಪ್ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಒಟ್ಟು 11 ಸಿಕ್ಸ್ಗಳನ್ನು ಬಾರಿಸಿ ಈ ದಾಖಲೆ ಬರೆದಿತ್ತು. ಈ ವೇಳೆ ಯುವರಾಜ್ ಸಿಂಗ್ ಒಬ್ಬರೇ 7 ಸಿಕ್ಸ್ ಸಿಡಿಸಿದ್ದರು. ಇದು ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾದ ಇದುವರೆಗಿನ ದಾಖಲೆಯಾಗಿತ್ತು.

ಇದೀಗ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಭಾರತೀಯ ಬ್ಯಾಟರ್ಗಳು ಒಟ್ಟು 13 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ 2007 ರಲ್ಲಿ ನಿರ್ಮಾಣವಾಗಿದ್ದ ರೆಕಾರ್ಡ್ ಅನ್ನು 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಬ್ಯಾಟರ್ಗಳು ಅಳಿಸಿ ಹಾಕಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



