ಇದಲ್ಲದೆ, ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಟಿ20 ವಿಶ್ವಕಪ್ನಲ್ಲಿ 1207 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ, ಏಕದಿನ ವಿಶ್ವಕಪ್ನಲ್ಲಿ 1795 ರನ್ ಬಾರಿಸಿದ್ದಾರೆ. ಈ ಮೂಲಕ ವಿಶ್ವಕಪ್ನಲ್ಲಿ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.