Virat Kohli: ದಾಖಲೆಗಳ ಸರದಾರನ ಹೆಸರಿಗೆ 3 ವಿಶ್ವ ದಾಖಲೆ ಸೇರ್ಪಡೆ

|

Updated on: Jun 23, 2024 | 9:03 AM

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಅಂಟಿಗುವಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 196 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ 146 ರನ್​ಗಳಿಸಲಷ್ಟೇ ಶಕ್ತವಾಗಿದೆ. ಈ ಮೂಲಕ ಭಾರತ ತಂಡವು 50 ರನ್​ಗಳ ಗೆಲುವು ಸಾಧಿಸಿದೆ.

1 / 5
T20 World Cup 2024: ಟಿ20 ವಿಶ್ವಕಪ್​ನ 47ನೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) 3 ಭರ್ಜರಿ ದಾಖಲೆಗಳನ್ನು ಬರೆದಿದ್ದಾರೆ. ಈ ಮೂರು ದಾಖಲೆಗಳು ವಿಶ್ವ ದಾಖಲೆ ಎಂಬುದು ವಿಶೇಷ. ಹಾಗಿದ್ರೆ ಕಿಂಗ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾದ ಹೊಸ ದಾಖಲೆಗಳಾವುವು ಎಂದು ನೋಡೋಣ...

2 / 5
ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ 28 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 3 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 37 ರನ್ ಬಾರಿಸಿದ್ದರು. ಈ 37 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ.

3 / 5
ಟಿ20 ವಿಶ್ವಕಪ್​ನಲ್ಲಿ 30 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 14 ಅರ್ಧಶತಕಗಳೊಂದಿಗೆ ಒಟ್ಟು 1207 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ವರ್ಲ್ಡ್​ ಕಪ್ ಇತಿಹಾಸದಲ್ಲೇ 1200 ರನ್​ಗಳ ಗಡಿದಾಟಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಹಾಗೆಯೇ ಐಸಿಸಿ ಸೀಮಿತ ಓವರ್​ಗಳ ಟೂರ್ನಿಯಲ್ಲಿ 3500 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಮತ್ತು ಏಕದಿನ ವಿಶ್ವಕಪ್​ ಪಂದ್ಯಗಳ ಮೂಲಕ ಕಿಂಗ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

5 / 5
ಇದಲ್ಲದೆ, ವಿಶ್ವಕಪ್​ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಟಿ20 ವಿಶ್ವಕಪ್​ನಲ್ಲಿ 1207 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ, ಏಕದಿನ ವಿಶ್ವಕಪ್​ನಲ್ಲಿ 1795 ರನ್ ಬಾರಿಸಿದ್ದಾರೆ. ಈ ಮೂಲಕ ವಿಶ್ವಕಪ್​ನಲ್ಲಿ 3 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.