AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಐಪಿಎಲ್​ನಲ್ಲಿ ಮೆರೆದಾಟ, ಅಮೆರಿಕದಲ್ಲಿ ಪರದಾಟ..!

Virat Kohli: ಈ ಬಾರಿಯ ಐಪಿಎಲ್​ನಲ್ಲಿ 15 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ 61.75 ಸರಾಸರಿಯಲ್ಲಿ ಒಟ್ಟು 741 ರನ್ ಕಲೆಹಾಕಿದ್ದರು. ಈ ವೇಳೆ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಒಂದು ಭರ್ಜರಿ ಶತಕ ಹಾಗೂ 5 ಅರ್ಧಶತಕಗಳು ಮೂಡಿಬಂದಿದ್ದವು. ಆದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿಯ ಬ್ಯಾಟ್ ಸದ್ದು ಮಾಡುತ್ತಿಲ್ಲ.

ಝಾಹಿರ್ ಯೂಸುಫ್
|

Updated on: Jun 13, 2024 | 11:09 AM

Share
T20 World Cup 2024: ಈ ಬಾರಿಯ ಐಪಿಎಲ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದ ವಿರಾಟ್ ಕೊಹ್ಲಿ (Virat Kohli) ಟಿ20 ವಿಶ್ವಕಪ್​ನಲ್ಲಿ ಮಂಕಾಗಿದ್ದಾರೆ. ಇದಕ್ಕೆ ಸಾಕ್ಷಿಯೇ ಮೊದಲ ಮೂರು ಪಂದ್ಯಗಳಲ್ಲಿ ಕೊಹ್ಲಿಯ ಪ್ರದರ್ಶನ. ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಕೊಹ್ಲಿ ಈವರೆಗೆ ಎರಡಂಕಿ ಮೊತ್ತ ಕಲೆಹಾಕಿಲ್ಲ ಎಂಬುದೇ ಅಚ್ಚರಿ.

1 / 8
ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೇವಲ 1 ರನ್​ಗಳಿಸಿ ಔಟಾಗಿದ್ದ ಕೊಹ್ಲಿ, ಪಾಕಿಸ್ತಾನ್ ವಿರುದ್ಧ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಯುಎಸ್​ಎ ವಿರುದ್ಧ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂರು ಪಂದ್ಯಗಳಲ್ಲಿ ಕೊಹ್ಲಿ ಎದುರಿಸಿದ್ದು ಕೇವಲ 9 ಎಸೆತಗಳನ್ನು ಮಾತ್ರ.

2 / 8
ಅಂದರೆ ಇಲ್ಲಿ ವಿರಾಟ್ ಕೊಹ್ಲಿಗೆ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂಬುದೇ ಸತ್ಯ. ಹೀಗಾಗಿಯೇ ಪವರ್​ಪ್ಲೇನಲ್ಲೇ ವಿಕೆಟ್ ಒಪ್ಪಿಸಿ ಹಿಂತಿರುಗುತ್ತಿದ್ದಾರೆ. ಅದರಲ್ಲೂ ಯುಎಸ್​ಎ ಮತ್ತು ಐರ್ಲೆಂಡ್​ನಂತಹ ತಂಡಗಳ ವಿರುದ್ಧ ಕೊಹ್ಲಿ ಅತ್ಯಂತ ಸುಲಭವಾಗಿ ವಿಕೆಟ್ ಒಪ್ಪಿಸಿರುವುದು ಇದೀಗ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

3 / 8
ಏಕೆಂದರೆ ಭಾರತದ ಪಾಲಿಗೆ ಸೂಪರ್-8 ಪಂದ್ಯಗಳು ನಿರ್ಣಾಯಕ. ಈ ವೇಳೆಗೆ ವಿರಾಟ್ ಕೊಹ್ಲಿ ಫಾರ್ಮ್ ಕಂಡುಕೊಳ್ಳಬೇಕಾದ ಅನಿವಾರ್ಯತೆಯಿದೆ. ಇಲ್ಲಿ ಪ್ರತಿ ಪಂದ್ಯಗಳು ಮುಖ್ಯವಾಗಿರಲಿದ್ದು, ಅದರಲ್ಲೂ ಕೊಹ್ಲಿಯಂತಹ ಅನುಭವಿ ಆಟಗಾರನ ಪಾತ್ರ ನಿರ್ಣಾಯಕವಾಗಿರುತ್ತದೆ. ಹೀಗಾಗಿಯೇ ಕೊಹ್ಲಿಯ ಫಾರ್ಮ್ ಬಗ್ಗೆ ಟೀಮ್ ಇಂಡಿಯಾ ತಲೆಕೆಡಿಸಿಕೊಂಡಿದೆ.

4 / 8
ಐಪಿಎಲ್ 2024 ರಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಅಮೆರಿಕಗೆ ಬಂದಿಳಿಯುತ್ತಿದ್ದಂತೆ ಫಾರ್ಮ್​ ಕಳೆದುಕೊಂಡಿರುವುದು ಕೂಡ ಒಂದು ಅಚ್ಚರಿ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ 15 ಪಂದ್ಯಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 741 ರನ್ ಬಾರಿಸಿ ಆರೆಂಜ್ ಕ್ಯಾಪ್ ವಿನ್ನರ್ ಆಗಿ ಹೊರಹೊಮ್ಮಿದ್ದರು.

5 / 8
ಇದಾಗಿ ಒಂದು ವಾರಗಳ ಬಳಿಕ ವಿರಾಟ್ ಕೊಹ್ಲಿ ಯುಎಸ್​ಎ ಗೆ ತೆರಳಿದ್ದರು. ಐಪಿಎಲ್​ನಲ್ಲಿ ಆರ್​ಸಿಬಿ ಪರ ಆರಂಭಿಕನಾಗಿ ಮಿಂಚಿದ್ದರಿಂದ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿಯನ್ನು ಓಪನರ್ ಆಗಿ ಕಣಕ್ಕಿಳಿಸಲಾಗಿತ್ತು. ಆದರೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ನ ಈ ಲೆಕ್ಕಾಚಾರಗಳು ತಲೆಕೆಳಗಾಗಿದೆ.

6 / 8
ಟಿ20 ವಿಶ್ವಕಪ್​ನಲ್ಲಿ ಆರಂಭಿಕನಾಗಿ ಆಡಿದ ಮೂರು ಪಂದ್ಯಗಳಿಂದ ವಿರಾಟ್ ಕೊಹ್ಲಿ ಕಲೆಹಾಕಿರುವುದು ಕೇವಲ 5 ರನ್​ಗಳು. ಇಲ್ಲಿ ನ್ಯೂಯಾರ್ಕ್​ ಪಿಚ್​ ಬೌಲಿಂಗ್​ಗೆ ಸಹಕಾರಿ ಎನ್ನುವುದಾದರೆ, ಅನುಭವಿ ಬ್ಯಾಟರ್ ಆಗಿರುವ ಕೊಹ್ಲಿ ಕನಿಷ್ಠ ಕ್ರೀಸ್ ಕಚ್ಚಿ ನಿಲ್ಲುವ ಪ್ರಯತ್ನವನ್ನಾದರೂ ಮಾಡಬಹುದಿತ್ತು ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ.

7 / 8
ಆದರೆ ಕಿಂಗ್ ಕೊಹ್ಲಿ ಕಡೆಯಿಂದ ಅಂತಹ ಯಾವುದೇ ಪ್ರಯತ್ನ ಕೂಡ  ಕಂಡು ಬರುತ್ತಿಲ್ಲ ಎಂಬುದೇ ಅಚ್ಚರಿ. ಹೀಗಾಗಿ ಕೊನೆಯ ಲೀಗ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಫಲರಾದರೆ, ಆರಂಭಿಕನ ಸ್ಥಾನ ಕಳೆದುಕೊಳ್ಳಲಿದ್ದಾರೆ. ಅಲ್ಲದೆ ಈ ಹಿಂದಿನಂತೆ ಮತ್ತೆ ಮೂರನೇ ಕ್ರಮಾಂಕದಲ್ಲೇ ಆಡಬಹುದು.

8 / 8
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ

ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು

ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!

ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ