T20 World Cup 2024: ಫೈನಲ್ ಪಂದ್ಯಗಳಲ್ಲಿ ಟಾಸ್ ಗೆದ್ದವರೇ ಬಾಸ್; ಇದು ಅಂಕಿ ಅಂಶ ಹೇಳಿದ ಸತ್ಯ

T20 World Cup 2024: ದುವರೆಗೆ ಟಿ20 ವಿಶ್ವಕಪ್‌ನ 8 ಫೈನಲ್‌ ಪಂದ್ಯಗಳು ನಡೆದಿವೆ. ಇದರಲ್ಲಿ ಒಮ್ಮೆ ಮಾತ್ರ ಟಾಸ್ ಸೋತ ತಂಡ ವಿಜಯಿಯಾಗಿದೆ. ಉಳಿದಂತೆ 7 ಬಾರಿ ಟಾಸ್ ಗೆದ್ದ ತಂಡ ಚಾಂಪಿಯನ್ ಆಗಿದೆ. ಇದಲ್ಲದೆ ಕಳೆದ 8 ವಿಶ್ವಕಪ್ ಫೈನಲ್‌ಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡವು 6 ಬಾರಿ ಚಾಂಪಿಯನ್ ಗೆದ್ದಿದ್ದರೆ, ಮೊದಲು ಬ್ಯಾಟ್ ಮಾಡಿದ ತಂಡ ಎರಡು ಬಾರಿ ಮಾತ್ರ ಪಂದ್ಯವನ್ನು ಗೆದ್ದಿದೆ.

|

Updated on: Jun 29, 2024 | 4:36 PM

ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯ ಇಂದು ರಾತ್ರಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿದೆ. ಎರಡೂ ತಂಡಗಳು ಇಲ್ಲಿಯವರೆಗೆ ಅಜೇಯವಾಗಿದ್ದು, ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲಲು ಬಯಸುತ್ತಿವೆ. ಎರಡೂ ತಂಡಗಳು ವಿಶ್ವಕಪ್ ಗೆಲ್ಲಲು ಭರದ ಸಿದ್ಧತೆ ನಡೆಸಿವೆ. ಏತನ್ಮಧ್ಯೆ, ಇಲ್ಲಿಯವರೆಗೆ ನಡೆದ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯಗಳಲ್ಲಿ ಗೆಲುವಿನ ಸೂತ್ರ ಯಾವುದು ಮತ್ತು ಯಾವ ತಂಡವು ಪ್ರಶಸ್ತಿ ಗೆದ್ದಿದೆ ಎಂಬುದನ್ನು ನೋಡೋಣ.

1 / 10
ಈ ಬಾರಿಯ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ನಡೆಯುತ್ತಿದೆ. ಇದುವರೆಗೆ ಟಿ20 ವಿಶ್ವಕಪ್‌ನ 8 ಫೈನಲ್‌ ಪಂದ್ಯಗಳು ನಡೆದಿವೆ. ಇದರಲ್ಲಿ ಒಮ್ಮೆ ಮಾತ್ರ ಟಾಸ್ ಸೋತ ತಂಡ ವಿಜಯಿಯಾಗಿದೆ. ಉಳಿದಂತೆ 7 ಬಾರಿ ಟಾಸ್ ಗೆದ್ದ ತಂಡ ಚಾಂಪಿಯನ್ ಆಗಿದೆ. ಇದಲ್ಲದೆ ಕಳೆದ 8 ವಿಶ್ವಕಪ್ ಫೈನಲ್‌ಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡವು 6 ಬಾರಿ ಚಾಂಪಿಯನ್ ಗೆದ್ದಿದ್ದರೆ, ಮೊದಲು ಬ್ಯಾಟ್ ಮಾಡಿದ ತಂಡ ಎರಡು ಬಾರಿ ಮಾತ್ರ ಪಂದ್ಯವನ್ನು ಗೆದ್ದಿದೆ.

2 / 10
2007: ಟಿ20 ವಿಶ್ವಕಪ್‌ನ ಮೊದಲ ಆವೃತ್ತಿಯನ್ನು 2007 ರಲ್ಲಿ ಆಡಲಾಯಿತು. ಈ ಬಾರಿಯ ವಿಶ್ವಕಪ್‌ನ ಫೈನಲ್ ಪಂದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಿತ್ತು. ಇಲ್ಲಿ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 157 ರನ್‌ ಗಳಿಸಿತ್ತು. ಉತ್ತರವಾಗಿ ಪಾಕಿಸ್ತಾನ ತಂಡ 19.3 ಓವರ್‌ಗಳಲ್ಲಿ 152 ರನ್‌ಗಳಿಗೆ ಆಲೌಟ್ ಆಯಿತು. ಈ ಪಂದ್ಯವನ್ನು ಭಾರತ 7 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ 16 ಎಸೆತಗಳಲ್ಲಿ 30 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು.

3 / 10
2009: ಟಿ20 ವಿಶ್ವಕಪ್‌ನ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವೆ ನಡೆಯಿತು. ಈ ಪಂದ್ಯದಲ್ಲಿ ಶ್ರೀಲಂಕಾ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಶ್ರೀಲಂಕಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಪಾಕಿಸ್ತಾನ ತಂಡ 18.4 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿತು. ಈ ಪಂದ್ಯವನ್ನು ಪಾಕಿಸ್ತಾನ 8 ವಿಕೆಟ್‌ಗಳಿಂದ ಗೆದ್ದು ವಿಶ್ವಕಪ್ ಗೆದ್ದುಕೊಂಡಿತು.

4 / 10
2010: ಟಿ20 ವಿಶ್ವಕಪ್‌ನ ಪ್ರಶಸ್ತಿ ಪಂದ್ಯ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 147 ರನ್ ಗಳಿಸಿತು. ಇಂಗ್ಲೆಂಡ್ 17 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 148 ರನ್ ಗಳಿಸಿತು. ಈ ಪಂದ್ಯವನ್ನು ಇಂಗ್ಲೆಂಡ್ 7 ವಿಕೆಟ್‌ಗಳಿಂದ ಗೆದ್ದು ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು.

5 / 10
2012:  2012ರ ಟಿ20 ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ತಂಡಗಳು ಫೈನಲ್‌ಗೆ ತಲುಪಿದ್ದವು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ 18.4 ಓವರ್​ಗಳಲ್ಲಿ 101 ರನ್ ಗಳಿಗೆ ಆಲೌಟ್ ಆಯಿತು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 36 ರನ್ ಗಳಿಂದ ಗೆದ್ದು ವಿಶ್ವಕಪ್ ಗೆದ್ದುಕೊಂಡಿತು.

6 / 10
2014: 2014ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಶ್ರೀಲಂಕಾ ಮತ್ತು ಭಾರತ ನಡುವೆ ನಡೆದಿತ್ತು. ಈ ಪಂದ್ಯದಲ್ಲಿ ಶ್ರೀಲಂಕಾ ಟಾಸ್ ಗೆದ್ದು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು. ಇದರಲ್ಲಿ ರೋಹಿತ್ ಶರ್ಮಾ 26 ಎಸೆತಗಳಲ್ಲಿ 29 ರನ್ ಮತ್ತು ವಿರಾಟ್ ಕೊಹ್ಲಿ 58 ಎಸೆತಗಳಲ್ಲಿ 77 ರನ್ ಗಳಿಸಿದರು. ಗುರಿ ಬೆನ್ನಟ್ಟಿದ ಶ್ರೀಲಂಕಾ 17.5 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 134 ರನ್ ಗಳಿಸಿತು. ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದು ಶ್ರೀಲಂಕಾ ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು.

7 / 10
2016:  ವೆಸ್ಟ್ ಇಂಡೀಸ್ 2016ರ ಟಿ20 ವಿಶ್ವಕಪ್ ಗೆದ್ದಿತ್ತು. ಈ ಬಾರಿಯ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಿತ್ತು. ವೆಸ್ಟ್ ಇಂಡೀಸ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿತು. ಇಂಗ್ಲೆಂಡ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ 19.4 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 161 ರನ್ ಗಳಿಸಿ ವಿಶ್ವಕಪ್ ಗೆದ್ದುಕೊಂಡಿತು.

8 / 10
2021: 2021 ರ ಪ್ರಶಸ್ತಿ ಪಂದ್ಯವು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿತು. ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು. ಈ ಪಂದ್ಯವನ್ನು ಆಸ್ಟ್ರೇಲಿಯಾ 8 ವಿಕೆಟ್‌ಗಳಿಂದ ಗೆದ್ದು ಮೊದಲ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು.

9 / 10
2022: ಕಳೆದ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವೆ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿತು. ಪಾಕಿಸ್ತಾನ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ 19 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಈ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ವಿಶ್ವಕಪ್ ಅನ್ನು ಗೆದ್ದುಕೊಂಡಿತು.

10 / 10
Follow us
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ

ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ

ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್

ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ

ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ

ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?

ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್

ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್

ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ

ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ