
T20 World Cup 2024: ಮುಂಬರುವ ಟಿ20 ವಿಶ್ವಕಪ್ಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದಾರೆ. ಹಾಗೆಯೇ ಹೆಬ್ಬೆರಳಿನ ಗಾಯದ ಕಾರಣ ಐಪಿಎಲ್ನಿಂದ ಹೊರಗುಳಿದಿರುವ ಡೆವೊನ್ ಕಾನ್ವೆ ಟಿ20 ವಿಶ್ವಕಪ್ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ.

ಇನ್ನು ಈ ತಂಡದಲ್ಲಿ ಆರಂಭಿಕನಾಗಿ ಯುವ ದಾಂಡಿಗ ಫಿನ್ ಅಲೆನ್ ಆಯ್ಕೆಯಾಗಿದ್ದು, ಇವರ ಜೊತೆಗೆ ಎಡಗೈ ದಾಂಡಿಗ ರಚಿನ್ ರವೀಂದ್ರ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಆಲ್ರೌಂಡರ್ಗಳಾಗಿ ಮೈಕೆಲ್ ಬ್ರೇಸ್‌ವೆಲ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್ ನ್ಯೂಝಿಲೆಂಡ್ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಕಿವೀಸ್ ಬಳಗದಲ್ಲಿ ವೇಗಿಗಳಾಗಿ ಟ್ರೆಂಟ್ ಬೌಲ್ಟ್, ಮ್ಯಾಟ್ ಹೆನ್ರಿ ಹಾಗೂ ಲಾಕಿ ಫರ್ಗುಸನ್ ಆಯ್ಕೆಯಾಗಿದ್ದಾರೆ. ಹಾಗೆಯೇ ಪರಿಪೂರ್ಣ ಸ್ಪಿನ್ನರ್ ಆಗಿ ಇಶ್ ಸೋಧಿಗೆ ಅವಕಾಶ ನೀಡಲಾಗಿದೆ. ಅದರಂತೆ ನ್ಯೂಝಿಲೆಂಡ್ ಟಿ20 ವಿಶ್ವಕಪ್ ತಂಡ ಈ ಕೆಳಗಿನಂತಿದೆ...

ನ್ಯೂಝಿಲೆಂಟ್ ಟಿ20 ವಿಶ್ವಕಪ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ.

ಹೊಸ ಜೆರ್ಸಿ ಬಿಡುಗಡೆ: ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ಗಾಗಿ ನ್ಯೂಝಿಲೆಂಡ್ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ. ಸಾಮಾನ್ಯವಾಗಿ ಕಪ್ಪು ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯುವ ಕಿವೀಸ್ ಪಡೆ, ಈ ಬಾರಿ ಟಿಫಾನಿ ಬ್ಲೂ ಬಣ್ಣದ ಸಮವಸ್ತ್ರ ಧರಿಸಲಿದೆ. ವಿಶೇಷ ಎಂದರೆ 1999 ರ ವಿಶ್ವಕಪ್ನಲ್ಲಿ ನ್ಯೂಝಿಲೆಂಡ್ ತಂಡ ಇದೇ ವಿನ್ಯಾಸದ ಜೆರ್ಸಿಯಲ್ಲಿ ಕಾಣಿಸಿಕೊಂಡಿತ್ತು. ಇದೀಗ ಮತ್ತೊಮ್ಮೆ ರೆಟ್ರೊ ಲುಕ್ ಜೆರ್ಸಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ.
Published On - 10:02 am, Mon, 29 April 24