AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ನಲ್ಲಿನ ಈ 5 ದಾಖಲೆಗಳನ್ನು ಮುರಿಯುವುದು ಕಷ್ಟಸಾಧ್ಯ..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಯುಎಸ್​ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗೆಯೇ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ಜೂನ್ 9 ರಂದು ನಡೆಯಲಿದೆ.

ಝಾಹಿರ್ ಯೂಸುಫ್
|

Updated on:May 18, 2024 | 2:30 PM

Share
T20 World Cup 2024: ಟಿ20 ವಿಶ್ವಕಪ್​ನ 9ನೇ ಆವೃತ್ತಿಗೆ ದಿನಗಣನೆ ಶುರುವಾಗಿದೆ. ಯುಎಸ್​ಎ-ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್​ನಲ್ಲೂ ಒಂದಷ್ಟು ದಾಖಲೆಗಳು ನಿರ್ಮಾಣವಾಗಲಿದೆ. ಆದರೆ ಕೆಲ ದಾಖಲೆಗಳನ್ನು ಮುರಿಯುವುದು ಮಾತ್ರ ಕಷ್ಟಸಾಧ್ಯ. ಅಂತಹ ಐದು ದಾಖಲೆಗಳು ಯಾವುವು ಎಂದು ತಿಳಿಯೋಣ...

1 / 6
1- ಅತ್ಯಧಿಕ ಸಿಕ್ಸರ್‌ಗಳು: ಟಿ20 ಕ್ರಿಕೆಟ್‌ನಲ್ಲಿ ಸಿಕ್ಸ್​ಗಳಿಗೇನು ಬರವಿರುವುದಿಲ್ಲ. ಆದರೆ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್​ನ ಮಾಜಿ ನಾಯಕ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ ಇದುವರೆಗೆ ಒಟ್ಟು 63 ಸಿಕ್ಸರ್ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಬ್ಯಾಟರ್​ ರೋಹಿತ್ ಶರ್ಮಾ. ಹಿಟ್​ಮ್ಯಾನ್ ಈವರೆಗೆ 35 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಇದಾಗ್ಯೂ ಗೇಲ್ ದಾಖಲೆಯನ್ನು ಮುರಿಯುವುದು ಕಷ್ಟಸಾಧ್ಯ ಎಂದೇ ಹೇಳಬಹುದು.

2 / 6
2- ಭಾರಿ ಅಂತರದ ಗೆಲುವು: 2007ರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡ ಕೀನ್ಯಾ ವಿರುದ್ಧ 172 ರನ್‌ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಇದು ಟಿ20 ವಿಶ್ವಕಪ್‌ನಲ್ಲಿ ಇದುವರೆಗಿನ ಭಾರೀ ಅಂತರದ ಗೆಲುವಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 260 ರನ್ ಗಳಿಸಿತ್ತು. ಇದು ಟಿ20 ವಿಶ್ವಕಪ್‌ನಲ್ಲಿನ ಗರಿಷ್ಠ ಸ್ಕೋರ್ ಎಂಬುದು ವಿಶೇಷ. ಹೀಗಾಗಿ ಈ ದಾಖಲೆಯನ್ನು ಮುರಿಯುವುದು ಕೂಡ ಸುಲಭವಲ್ಲ.

3 / 6
3- ವೇಗದ ಅರ್ಧಶತಕ: ಭಾರತದ ಮಾಜಿ ಬಲಗೈ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಟಿ20 ವಿಶ್ವಕಪ್‌ನಲ್ಲಿ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. 2007ರ ವಿಶ್ವಕಪ್‌ನಲ್ಲಿ ನಿರ್ಮಾಣವಾದ ಈ ದಾಖಲೆಯನ್ನು ಇಂದಿಗೂ ಯಾರಿಗೂ ಅಳಿಸಲಾಗಲಿಲ್ಲ. ಹಾಗೆಯೇ ಟಿ20 ವಿಶ್ವಕಪ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ದಾಖಲೆ ಕೂಡ ಯುವಿ ಹೆಸರಿನಲ್ಲಿದೆ. ಹೀಗಾಗಿ ಈ ದಾಖಲೆಗಳನ್ನು ಮುರಿಯುವುದು ಕೂಡ ಕಷ್ಟಸಾಧ್ಯ ಎಂದೇ ಹೇಳಬಹುದು.

4 / 6
4- ಬಿಗ್ ಚೇಸ್: 2016ರ ಟಿ20 ವಿಶ್ವಕಪ್​ನ ಗ್ರೂಪ್ ಹಂತದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 4 ವಿಕೆಟ್ ನಷ್ಟಕ್ಕೆ 229 ರನ್ ಗಳಿಸಿತ್ತು. ಈ ಮೊತ್ತವನ್ನು ಇಂಗ್ಲೆಂಡ್ ತಂಡ 8 ವಿಕೆಟ್ ನಷ್ಟಕ್ಕೆ ಚೇಸ್ ಮಾಡಿ ಗೆಲುವು ದಾಖಲಿಸಿತ್ತು. ಅಚ್ಚರಿ ಎಂದರೆ ಅಂತಹದೊಂದು ಬೃಹತ್ ಮೊತ್ತದ ಚೇಸ್ ಆ ಬಳಿಕ ಟಿ20 ವಿಶ್ವಕಪ್​ನಲ್ಲಿ ಕಂಡು ಬಂದಿಲ್ಲ. ಹೀಗಾಗಿ ಈ ದಾಖಲೆಯನ್ನು ಕೂಡ ಮುರಿಯುವುದು ಕೂಡ ಅಂದುಕೊಂಡಷ್ಟು ಸುಲಭವಲ್ಲ.

5 / 6
5- ಅತ್ಯಧಿಕ ರನ್​: ವಿರಾಟ್ ಕೊಹ್ಲಿ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಗರಿಷ್ಠ ರನ್ ಸರಾಸರಿ ಹೊಂದಿರುವ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಕಿಂಗ್ ಕೊಹ್ಲಿ 27 ಪಂದ್ಯಗಳನ್ನು ಆಡಿದ್ದು, ಈ ವೇಳೆ 81.50 ಸರಾಸರಿಯಲ್ಲಿ 1141 ರನ್ ಗಳಿಸಿದ್ದಾರೆ. ಅಲ್ಲದೆ ಇದೇ 14 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ದಾಖಲೆಯನ್ನೂ ಕೂಡ ಮುರಿಯುವುದು ಸುಲಭವಲ್ಲ ಎಂದೇ ಹೇಳಬಹುದು.

6 / 6

Published On - 2:29 pm, Sat, 18 May 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!