Hardik Pandya: ಹಾರ್ದಿಕ್ ಪಾಂಡ್ಯ ಕನಸು ನುಚ್ಚುನೂರು: ರೋಹಿತ್ ಶರ್ಮಾ ಕ್ಯಾಪ್ಟನ್

Edited By:

Updated on: Feb 15, 2024 | 10:31 AM

T20 World Cup 2024: ವೆಸ್ಟ್ ಇಂಡೀಸ್ ಮತ್ತು ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ವಿಶ್ವಕಪ್​ ಜೂನ್ 1 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇದರೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿಯುವುದು ಖಚಿತವಾಗಿದೆ.

1 / 6
2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದಾರೆ. ಇದರೊಂದಿಗೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ (Hardik Pandya) ಅವರ ಕನಸು ನುಚ್ಚುನೂರಾಗಿದೆ. ಏಕೆಂದರೆ ಕಳೆದ ಒಂದು ವರ್ಷದಿಂದ ಭಾರತ ಟಿ20 ತಂಡವನ್ನು ಪಾಂಡ್ಯ ಮುನ್ನಡೆಸುತ್ತಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವರೇ ನಾಯಕ ಎನ್ನಲಾಗಿತ್ತು.

2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದಾರೆ. ಇದರೊಂದಿಗೆ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ (Hardik Pandya) ಅವರ ಕನಸು ನುಚ್ಚುನೂರಾಗಿದೆ. ಏಕೆಂದರೆ ಕಳೆದ ಒಂದು ವರ್ಷದಿಂದ ಭಾರತ ಟಿ20 ತಂಡವನ್ನು ಪಾಂಡ್ಯ ಮುನ್ನಡೆಸುತ್ತಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವರೇ ನಾಯಕ ಎನ್ನಲಾಗಿತ್ತು.

2 / 6

ಇತ್ತ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಂದು ವರ್ಷದಿಂದ ಟಿ20 ಕ್ರಿಕೆಟ್​ನಿಂದ ಹೊರಗುಳಿದಿದ್ದರು. ಆದರೆ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಇಬ್ಬರೂ ಕೂಡ ಕಂಬ್ಯಾಕ್ ಮಾಡಿದ್ದರು. ಈ ಕಂಬ್ಯಾಕ್ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾಗೆ ಟಿ20 ನಾಯಕತ್ವ ಒಲಿದಿದೆ.

3 / 6

ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಮುಂದಾಳತ್ವದಲ್ಲೇ ಭಾರತ ತಂಡ ಕಣಕ್ಕಿಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ವಿಶ್ವಾಸದಲ್ಲಿದ್ದ ಹಾರ್ದಿಕ್ ಪಾಂಡ್ಯ ಕನಸು ಕೂಡ ಕಮರಿದೆ.

4 / 6

ಪ್ರಸ್ತುತ ಮಾಹಿತಿ ಪ್ರಕಾರ, ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುವುದು ಖಚಿತ. ಇನ್ನು ಇದುವರೆಗೆ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯರನ್ನು ಉಪನಾಯಕನಾಗಿ ಆಯ್ಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಹಾಗೆಯೇ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯಲಿದ್ದಾರೆ.

5 / 6

ಕುತೂಹಲಕಾರಿ ವಿಷಯ ಎಂದರೆ, ಕೆಲ ತಿಂಗಳ ಹಿಂದೆಯಷ್ಟೇ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿತ್ತು. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯರನ್ನು ನೂತನ ನಾಯಕನ್ನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಭಾರತ ತಂಡದ ನಾಯಕತ್ವದಲ್ಲೂ ಮಹತ್ವದ ಬದಲಾವಣೆಯಾಗಿದೆ.

6 / 6

ಇಲ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯಗೆ ಇದೀಗ ಕ್ಯಾಪ್ಟನ್ಸಿ ಕೈ ತಪ್ಪಿದೆ. ಅಲ್ಲದೆ ರೋಹಿತ್ ಶರ್ಮಾ ಅವರನ್ನು ಮತ್ತೊಮ್ಮೆ ಭಾರತ ಟಿ20 ತಂಡದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಹಿಟ್​ಮ್ಯಾನ್ ಮುಂದಾಳತ್ವದಲ್ಲೇ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

Loading...
Unable to load recommendations.
Follow Us