IND vs IRE: ಮೊದಲ ಪಂದ್ಯದಲ್ಲೇ ದಾಖಲೆಗಳ ಸರಮಾಲೆ ಕಟ್ಟಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ..!

Updated on: Jun 05, 2024 | 11:24 PM

T20 World Cup 2024 Rohit Sharma: ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ರೋಹಿತ್ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 52 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲಿ ಪ್ರಮುಖ 3 ದಾಖಲೆಗಳ ಪಟ್ಟಿ ಇಲ್ಲಿದೆ.

1 / 6
ಇಂದು ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಐರ್ಲೆಂಡ್ ನೀಡಿದ 96 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಇಂದು ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಐರ್ಲೆಂಡ್ ನೀಡಿದ 96 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

2 / 6

ಈ ಪಂದ್ಯದಲ್ಲಿ 37 ಎಸೆತಗಳನ್ನು ಎದುರಿಸಿದ ರೋಹಿತ್ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 52 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇದರೊಂದಿಗೆ ಈ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಅದರಲ್ಲಿ ಪ್ರಮುಖ 3 ದಾಖಲೆಗಳ ಪಟ್ಟಿ ಇಲ್ಲಿದೆ.

3 / 6

ತಂಡದ ಪರ 52 ರನ್​​ಗಳ ಇನ್ನಿಂಗ್ಸ್ ಆಡಿದ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದರು. ಇದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿರು. ಇದಕ್ಕೂ ಮುನ್ನ ಭಾರತದ ಆಟಗಾರ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನಿ ಆಟಗಾರ ಬಾಬರ್ ಆಝಂ ಈ ಸಾಧನೆ ಮಾಡಿದ್ದರು.

4 / 6

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 4038 ರನ್ ಗಳಿಸಿದ್ದರೆ, ಬಾಬರ್ ಆಝಂ ಟಿ20ಯಲ್ಲಿ ಒಟ್ಟು 4023 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ 152ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದು, ಅತಿ ಕಡಿಮೆ ಎಸೆತಗಳಲ್ಲಿ ಅಂದರೆ 2861 ಎಸೆತಗಳಲ್ಲಿ 4000 ರನ್ ಪೂರೈಸಿದ ದಾಖಲೆ ಬರೆದಿದ್ದಾರೆ.

5 / 6

ಹಾಗೆಯೇ ರೋಹಿತ್ ಶರ್ಮಾ ಟಿ20 ವಿಶ್ವಕಪ್‌ನಲ್ಲಿ 1000 ರನ್ ಗಳಿಸಿದ ದಾಖಲೆಯನ್ನೂ ಮಾಡಿದ್ದಾರೆ. ಇದಕ್ಕೂ ಮುನ್ನ ಭಾರತದ ಆಟಗಾರ ವಿರಾಟ್ ಕೊಹ್ಲಿ ಹಾಗೂ ಶ್ರೀಲಂಕಾ ಆಟಗಾರ ಮಹೇಲಾ ಜಯವರ್ಧನೆ ಈ ಸಾಧನೆ ಮಾಡಿದ್ದರು. ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಇಲ್ಲಿಯವರೆಗೆ 1142 ರನ್ ಗಳಿಸಿದ್ದರೆ, ಟಿ20 ವಿಶ್ವಕಪ್‌ನಲ್ಲಿ ಮಹೇಲಾ ಜಯವರ್ಧನೆ 1016 ರನ್ ಬಾರಿಸಿದ್ದಾರೆ.

6 / 6

ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಮೂರು ಸಿಕ್ಸರ್ ಬಾರಿಸಿದರು. ಇದರೊಂದಿಗೆ ಅವರು 600 ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಮಾಜಿ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಅವರು ಒಟ್ಟು 553 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

Loading...
Unable to load recommendations.
Follow Us