ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಭೇಟಿಯಾಗಿದ್ದಾರೆ. ಮುಂಬೈನ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮೂವರು ಸಭೆ ನಡೆಸಿದ್ದು, ಈ ವೇಳೆ ಮುಂಬರುವ ಟಿ20 ವಿಶ್ವಕಪ್ಗಾಗಿ ತಂಡದ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.