Team India: ರೋಹಿತ್ ಶರ್ಮಾ ಜೊತೆ ಅಗರ್ಕರ್​ ಚರ್ಚೆ: ಹಾರ್ದಿಕ್ ಪಾಂಡ್ಯಗೆ ನಡುಕ ಶುರು..!

| Updated By: ಝಾಹಿರ್ ಯೂಸುಫ್

Updated on: Apr 17, 2024 | 1:30 PM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಮುಂಬೈ ಇಂಡಿಯನ್ಸ್ ಪರ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಿರುವ ಹಾರ್ದಿಕ್ ಪಾಂಡ್ಯ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಈ ವೈಫಲ್ಯದ ನಡುವೆ ಇದೀಗ ಹಾರ್ದಿಕ್ ಪಾಂಡ್ಯಗೆ ಟಿ20 ವಿಶ್ವಕಪ್​ ತಂಡದಿಂದ ಹೊರಬೀಳುವ ಭೀತಿ ಎದುರಾಗಿದೆ. ಹೀಗಾಗಿ ಐಪಿಎಲ್​ನ ದ್ವಿತೀಯಾರ್ಧದ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಮುಂದಿದೆ.

1 / 6
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಭೇಟಿಯಾಗಿದ್ದಾರೆ. ಮುಂಬೈನ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮೂವರು ಸಭೆ ನಡೆಸಿದ್ದು, ಈ ವೇಳೆ ಮುಂಬರುವ ಟಿ20 ವಿಶ್ವಕಪ್​ಗಾಗಿ ತಂಡದ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

2 / 6
ಈ ವಿಶೇಷ ಸಭೆಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಯ್ಕೆ ಬಗ್ಗೆ ಕೂಡ ಚರ್ಚಿಸಲಾಗಿದೆ ಎಂದು ವರದಿಯಾಗಿದೆ. ಏಕೆಂದರೆ ಟಿ20 ವಿಶ್ವಕಪ್​ ತಂಡದಲ್ಲಿ ಆಲ್​ರೌಂಡರ್ ಆಗಿ ಪಾಂಡ್ಯ ಆಯ್ಕೆಯಾಗಬೇಕಿದ್ದರೆ ಉತ್ತಮ ಬೌಲಿಂಗ್ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ. ಆದರೆ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಪಾಂಡ್ಯ ಅವರ ಪ್ರದರ್ಶನ ನಿರಾಶದಾಯಕ.

3 / 6
ಆರು ಪಂದ್ಯಗಳಲ್ಲಿ ಕೇವಲ 11 ಓವರ್​ಗಳನ್ನು ಮಾತ್ರ ಎಸೆದಿರುವ ಹಾರ್ದಿಕ್ ಪಾಂಡ್ಯ ಪಡೆದಿರುವುದು 3 ವಿಕೆಟ್​ಗಳು ಮಾತ್ರ. ಇದೇ ವೇಳೆ ಪ್ರತಿ ಓವರ್​ಗೆ 12ರ ಸರಾಸರಿಯಲ್ಲಿ ಒಟ್ಟು 132 ರನ್ ನೀಡಿದ್ದಾರೆ. ಅಲ್ಲದೆ 6 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 131 ರನ್​ಗಳು ಮಾತ್ರ.

4 / 6
ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯುತ್ತಿರುವ ಶಿವಂ ದುಬೆ ಭರ್ಜರಿ ಫಾರ್ಮ್ ಪ್ರದರ್ಶಿಸುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸಿರುವ ದುಬೆ 163 ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 242 ರನ್ ಕಲೆಹಾಕಿದ್ದಾರೆ.

5 / 6
ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ವಿಶ್ವಕಪ್ ತಂಡದಲ್ಲಿ ಆಲ್​ರೌಂಡರ್ ಆಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಬೇಕಾ? ಶಿವಂ ದುಬೆಗೆ ಅವಕಾಶ ನೀಡಬೇಕಾ ಎಂಬ ಗೊಂದಲ ಬಿಸಿಸಿಐ ಆಯ್ಕೆ ಸಮಿತಿ ಮುಂದಿದೆ.

6 / 6
ಈ ಬಗ್ಗೆ ರೋಹಿತ್ ಶರ್ಮಾ ಅವರೊಂದಿಗೆ ಅಜಿತ್ ಅಗರ್ಕರ್ ಚರ್ಚಿಸಿದ್ದು, ಈ ಕುರಿತಾದ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಈ ತಿಂಗಳ ಕೊನೆಯಲ್ಲಿ ಮತ್ತೊಮ್ಮೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಸಭೆಯ ಬಳಿಕ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಘೋಷಿಸುವ ಸಾಧ್ಯತೆಯಿದೆ.