AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: 20 ತಂಡಗಳು, 4 ಗುಂಪುಗಳು: ಹೇಗಿರಲಿದೆ ಟಿ20 ವಿಶ್ವಕಪ್?

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ಟೀಮ್ ಇಂಡಿಯಾ ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇನ್ನು ಫೈನಲ್ ಪಂದ್ಯವು ಜೂನ್ 29 ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: May 18, 2024 | 12:52 PM

Share
T20 World Cup 2024: ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಯುಎಸ್​ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ಜರುಗಲಿರುವ ಈ ಬಾರಿಯ ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಮೂಲಕ ಒಂದು ತಿಂಗಳ ಅಂತರದಲ್ಲಿ ಒಟ್ಟು 55 ಪಂದ್ಯಗಳನ್ನು ಆಯೋಜಿಸಲು ಐಸಿಸಿ ಭರ್ಜರಿ ಪ್ಲ್ಯಾನ್ ರೂಪಿಸಿದೆ.

1 / 6
ಈ ಬಾರಿಯ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 20 ತಂಡಗಳನ್ನು 4 ಗ್ರೂಪ್​ಗಳಲ್ಲಿ ವಿಂಗಡಿಸಲಾಗಿದೆ. ಪ್ರತಿ ಗುಂಪುಗಳಲ್ಲಿ 5 ತಂಡಗಳು ಕಾಣಿಸಿಕೊಳ್ಳಲಿದೆ. ಅದರಂತೆ ಲೀಗ್ ಹಂತದಲ್ಲಿ A,B,C ಮತ್ತು D ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ.

2 / 6
ಇಲ್ಲಿ ಪ್ರತಿ ಗುಂಪುಗಳಲ್ಲಿರುವ ತಂಡ ಒಟ್ಟು 4 ಪಂದ್ಯಗಳನ್ನಾಡಲಿದೆ. ಉದಾಹರಣೆಗೆ ಭಾರತ ತಂಡವು ಎ ಗ್ರೂಪ್​ನಲ್ಲಿದ್ದು, ಈ ಗ್ರೂಪ್​ನಲ್ಲಿರುವ ಪಾಕಿಸ್ತಾನ್, ಐರ್ಲೆಂಡ್, ಕೆನಡಾ ಮತ್ತು ಯುಎಸ್​ಎ ವಿರುದ್ಧ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

3 / 6
4 ಗ್ರೂಪ್​ಗಳ ನಡುವಣ ಪಂದ್ಯಗಳ ಬಳಿಕ ಪಾಯಿಂಟ್ಸ್ ಟೇಬಲ್​ ಲೆಕ್ಕಾಚಾರ ಬರಲಿದೆ. ಅಂದರೆ ಆಯಾ ಗ್ರೂಪ್​ಗಳ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಮುಂದಿನ ಹಂತಕ್ಕೇರಲಿದೆ. ಈ ಮೂಲಕ ನಾಲ್ಕು ಗುಂಪುಗಳಿಂದ ಒಟ್ಟು 8 ತಂಡಗಳು ಸೂಪರ್-8 ಹಂತಕ್ಕೇರಲಿದೆ.

4 / 6
ಸೂಪರ್-8 ಹಂತದಲ್ಲಿ ಒಟ್ಟು 8 ತಂಡಗಳ ನಡುವೆ ಕಾದಾಟ ನಡೆಯಲಿದೆ. ಈ ಹಂತದಲ್ಲಿ ಎಂಟು ತಂಡಗಳು ಪರಸ್ಪರ ಒಂದೊಂದು ಪಂದ್ಯಗಳನ್ನಾಡಲಿದೆ. ಈ ವೇಳೆ ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ 4 ತಂಡಗಳು ನಾಕೌಟ್ ಹಂತಕ್ಕೇರಲಿದೆ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಕಾದಾಟ ನಡೆಯಲಿದೆ. ಸೆಮಿಫೈನಲ್​ನಲ್ಲಿ ಗೆಲ್ಲುವ 2 ತಂಡಗಳು ಜೂನ್ 29 ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

5 / 6
ಟಿ20 ವಿಶ್ವಕಪ್ ಗ್ರೂಪ್​:- ಭಾರತ, ಪಾಕಿಸ್ತಾನ್, ಐರ್ಲೆಂಡ್, ಕೆನಡಾ, ಯುಎಸ್​ಎ (ಗ್ರೂಪ್-A), ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್ (ಗ್ರೂಪ್-B), ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ವೆಸ್ಟ್ ಇಂಡೀಸ್, ಉಗಾಂಡ, ಪಪುವಾ ನ್ಯೂಗಿನಿಯಾ (ಗ್ರೂಪ್-C), ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್​ಲೆಂಡ್ಸ್​, ಶ್ರೀಲಂಕಾ, ನೇಪಾಳ (ಗ್ರೂಪ್-D).

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ

ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ

‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ

ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು