
T20 World Cup 2024: ಬಹುನಿರೀಕ್ಷಿತ ಟಿ20 ವಿಶ್ವಕಪ್ಗೆ ದಿನಗಣನೆ ಶುರುವಾಗಿದೆ. ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ಜರುಗಲಿರುವ ಈ ಬಾರಿಯ ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿರುವುದು ವಿಶೇಷ. ಈ ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಮೂಲಕ ಒಂದು ತಿಂಗಳ ಅಂತರದಲ್ಲಿ ಒಟ್ಟು 55 ಪಂದ್ಯಗಳನ್ನು ಆಯೋಜಿಸಲು ಐಸಿಸಿ ಭರ್ಜರಿ ಪ್ಲ್ಯಾನ್ ರೂಪಿಸಿದೆ.

ಈ ಬಾರಿಯ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 20 ತಂಡಗಳನ್ನು 4 ಗ್ರೂಪ್ಗಳಲ್ಲಿ ವಿಂಗಡಿಸಲಾಗಿದೆ. ಪ್ರತಿ ಗುಂಪುಗಳಲ್ಲಿ 5 ತಂಡಗಳು ಕಾಣಿಸಿಕೊಳ್ಳಲಿದೆ. ಅದರಂತೆ ಲೀಗ್ ಹಂತದಲ್ಲಿ A,B,C ಮತ್ತು D ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ.

ಇಲ್ಲಿ ಪ್ರತಿ ಗುಂಪುಗಳಲ್ಲಿರುವ ತಂಡ ಒಟ್ಟು 4 ಪಂದ್ಯಗಳನ್ನಾಡಲಿದೆ. ಉದಾಹರಣೆಗೆ ಭಾರತ ತಂಡವು ಎ ಗ್ರೂಪ್ನಲ್ಲಿದ್ದು, ಈ ಗ್ರೂಪ್ನಲ್ಲಿರುವ ಪಾಕಿಸ್ತಾನ್, ಐರ್ಲೆಂಡ್, ಕೆನಡಾ ಮತ್ತು ಯುಎಸ್ಎ ವಿರುದ್ಧ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ.

4 ಗ್ರೂಪ್ಗಳ ನಡುವಣ ಪಂದ್ಯಗಳ ಬಳಿಕ ಪಾಯಿಂಟ್ಸ್ ಟೇಬಲ್ ಲೆಕ್ಕಾಚಾರ ಬರಲಿದೆ. ಅಂದರೆ ಆಯಾ ಗ್ರೂಪ್ಗಳ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಮುಂದಿನ ಹಂತಕ್ಕೇರಲಿದೆ. ಈ ಮೂಲಕ ನಾಲ್ಕು ಗುಂಪುಗಳಿಂದ ಒಟ್ಟು 8 ತಂಡಗಳು ಸೂಪರ್-8 ಹಂತಕ್ಕೇರಲಿದೆ.

ಸೂಪರ್-8 ಹಂತದಲ್ಲಿ ಒಟ್ಟು 8 ತಂಡಗಳ ನಡುವೆ ಕಾದಾಟ ನಡೆಯಲಿದೆ. ಈ ಹಂತದಲ್ಲಿ ಎಂಟು ತಂಡಗಳು ಪರಸ್ಪರ ಒಂದೊಂದು ಪಂದ್ಯಗಳನ್ನಾಡಲಿದೆ. ಈ ವೇಳೆ ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಕಾಣಿಸಿಕೊಳ್ಳುವ 4 ತಂಡಗಳು ನಾಕೌಟ್ ಹಂತಕ್ಕೇರಲಿದೆ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಕಾದಾಟ ನಡೆಯಲಿದೆ. ಸೆಮಿಫೈನಲ್ನಲ್ಲಿ ಗೆಲ್ಲುವ 2 ತಂಡಗಳು ಜೂನ್ 29 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಟಿ20 ವಿಶ್ವಕಪ್ ಗ್ರೂಪ್:- ಭಾರತ, ಪಾಕಿಸ್ತಾನ್, ಐರ್ಲೆಂಡ್, ಕೆನಡಾ, ಯುಎಸ್ಎ (ಗ್ರೂಪ್-A), ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಒಮಾನ್ (ಗ್ರೂಪ್-B), ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ವೆಸ್ಟ್ ಇಂಡೀಸ್, ಉಗಾಂಡ, ಪಪುವಾ ನ್ಯೂಗಿನಿಯಾ (ಗ್ರೂಪ್-C), ಸೌತ್ ಆಫ್ರಿಕಾ, ಬಾಂಗ್ಲಾದೇಶ್, ನೆದರ್ಲೆಂಡ್ಸ್, ಶ್ರೀಲಂಕಾ, ನೇಪಾಳ (ಗ್ರೂಪ್-D).