ಟಿ20 ವಿಶ್ವಕಪ್‌ಗೆ ಹಾರ್ದಿಕ್ ನಾಯಕ! ಖಚಿತ ಪಡಿಸಿದ ಸ್ಟಾರ್ ಸ್ಪೋರ್ಟ್ಸ್ ಪೋಸ್ಟರ್
T20 World Cup 2024: ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಿಸಿದಂತೆ ಎರಡೂ ತಂಡಗಳ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡಿದೆ. ಅದರಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ನಾಯಕರನ್ನಾಗಿ ತೋರಿಸಲಾಗಿದೆ.
1 / 7
ಐಸಿಸಿ ನಿನ್ನೆಯಷ್ಟೇ ಅಂದರೆ ಜನವರಿ 5 ರಂದು ಮುಂಬರುವ ಟಿ20 ವಿಶ್ವಕಪ್ನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರೊಂದಿಗೆ ಯಾವ ತಂಡದ ಪಂದ್ಯ ಯಾವ ದಿನ, ಯಾವ ತಂಡದೊಂದಿಗೆ ನಡೆಯಲಿದೆ ಎಂಬುದು ಸ್ಪಷ್ಟವಾಗಿದೆ.
2 / 7
ವೇಳಾಪಟ್ಟಿಯ ಪ್ರಕಾರ ಜೂನ್ 1 ರಿಂದ 2024 ರ ಟಿ20 ವಿಶ್ವಕಪ್ ಆರಂಭವಾಗಲಿದೆ. ಆ ಬಳಿಕ ಟೀಂ ಇಂಡಿಯಾದ ಮೊದಲ ಪಂದ್ಯವು ಜೂನ್ 5 ರಂದು ಐರ್ಲೆಂಡ್ ವಿರುದ್ಧ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.
3 / 7
ಆ ಬಳಿಕ ಭಾರತ ತಂಡದ ಮುಂದಿನ ಪಂದ್ಯ ಜೂನ್ 9 ರಂದು ಪಾಕಿಸ್ತಾನದೊಂದಿಗೆ ನಡೆಯಲಿದೆ. ಇದೀಗ ಸ್ಟಾರ್ ಸ್ಪೋರ್ಟ್ಸ್ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಮ್ಯಾಚ್ ಪೋಸ್ಟ್ ಅನ್ನು ಬಿಡುಗಡೆ ಮಾಡಿದೆ. ಎರಡೂ ತಂಡಗಳ ನಾಯಕರನ್ನು ಈ ಪೋಸ್ಟ್‌ನಲ್ಲಿ ತೋರಿಸಲಾಗಿದೆ. ಇದರೊಂದಿಗೆ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಕೂಡ ಸಿಕ್ಕಂತ್ತಾಗಿದೆ.
4 / 7
ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಸಂಬಂಧಿಸಿದಂತೆ ಎರಡೂ ತಂಡಗಳ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಸ್ಟಾರ್ ಸ್ಪೋರ್ಟ್ಸ್ ಹಂಚಿಕೊಂಡಿದೆ. ಅದರಲ್ಲಿ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಭಾರತ ತಂಡದ ನಾಯಕರನ್ನಾಗಿ ತೋರಿಸಲಾಗಿದೆ.
5 / 7
ಈ ಪೋಸ್ಟ್ ಹೊರಬಿದ್ದ ಬಳಿಕ 2024 ರ ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಆದರೆ ಹಲವು ನೆಟ್ಟಿಗರು ಹಾರ್ದಿಕ್ ನಾಯಕತ್ವಕ್ಕೆ ಅಪಸ್ವರ ಎತ್ತಿದ್ದು, ರೋಹಿತ್ಗೆ ನಾಯಕತ್ವ ನೀಡಬೇಕು ಎಂದಿದ್ದಾರೆ.
6 / 7
ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ ಮತ್ತು ತಂಡಕ್ಕೆ ಮರಳುವ ಬಗ್ಗೆ ಯಾವುದೇ ನವೀಕರಣವಿಲ್ಲ. ಕಳೆದ ಒಂದು ವರ್ಷದಿಂದ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದರು. ಆದರೆ ಇದೀಗ ಹಾರ್ದಿಕ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದು, ಜನವರಿ 11 ರಿಂದ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕರಾಗುವ ನಿರೀಕ್ಷೆಯಿದೆ.
7 / 7
ಈ ಬಾರಿ 2024ರ ಟಿ20 ವಿಶ್ವಕಪ್‌ಗೆ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯ ವಹಿಸಲಿವೆ. 2024ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಮೊದಲ ಗುಂಪಿನಲ್ಲಿ ಭಾರತ ತಂಡದೊಂದಿಗೆ ಪಾಕಿಸ್ತಾನ, ಐರ್ಲೆಂಡ್, ಯುಎಸ್ಎ ಮತ್ತು ಕೆನಡಾ ತಂಡಗಳು ಸ್ಥಾನ ಪಡೆದಿವೆ.
Published On - 4:39 pm, Sat, 6 January 24