- Kannada News Photo gallery Cricket photos T20 World Cup 2024 sunil gavaskar reaction on virat kohli single digit dismissal
T20 World Cup 2024: ಐರ್ಲೆಂಡ್ ವಿರುದ್ಧ ಕೊಹ್ಲಿ ಒಂದಂಕಿಗೆ ಸುಸ್ತು; ಅಚ್ಚರಿ ಮೂಡಿಸಿದ ಗವಾಸ್ಕರ್ ರಿಯಾಕ್ಷನ್..!
T20 World Cup 2024: ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ 5 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಔಟಾದರು. ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ಮತ್ತು ಬಾಬರ್ ಆಝಂ ಅವರಂತಹ ಸ್ಟಾರ್ ಆಟಗಾರರು ಒಂದು ಪಂದ್ಯದಲ್ಲಿ ವಿಫಲವಾದ ನಂತರ ಮುಂದಿನ ಪಂದ್ಯದಲ್ಲಿ ಅದನ್ನು ಸರಿದೂಗಿಸಲು ಯೋಚಿಸುತ್ತಾರೆ ಎಂದು ನಾನು ನಂಬುತ್ತೇನೆ.
Updated on: Jun 06, 2024 | 8:51 PM

ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಐರ್ಲೆಂಡ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸುವ ಮೂಲಕ ವಿಶ್ವಕಪ್‌ನಲ್ಲಿ ಉತ್ತಮ ಆರಂಭ ಮಾಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ಕೇವಲ 96 ರನ್‌ಗಳಿಗೆ ಆಲೌಟ್ ಆಯಿತು ಗುರಿ ಬೆನ್ನಟ್ಟಿದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ಆಧಾರದ ಮೇಲೆ ಸುಲಭ ಜಯ ದಾಖಲಿಸಿತು.

ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾಗೆ ಉತ್ತಮ ಆರಂಭ ಒದಗಿಸುವಲ್ಲಿ ನೂತನ ಆರಂಭಿಕ ಜೋಡಿ ವಿಫಲವಾಗಿತ್ತು. ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಆರಂಭಿಸಿದ್ದರು. ಇದರಲ್ಲಿ ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರೆ, ವಿರಾಟ್ ಕೊಹ್ಲಿ ಒಂದಂಕಿಗೆ ಸುಸ್ತಾಗಿದ್ದರು.

ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ 5 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಔಟಾದರು. ನಂತರ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಮಾತನಾಡಿದ ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ಮತ್ತು ಬಾಬರ್ ಆಝಂ ಅವರಂತಹ ಸ್ಟಾರ್ ಆಟಗಾರರು ಒಂದು ಪಂದ್ಯದಲ್ಲಿ ವಿಫಲವಾದ ನಂತರ ಮುಂದಿನ ಪಂದ್ಯದಲ್ಲಿ ಅದನ್ನು ಸರಿದೂಗಿಸಲು ಯೋಚಿಸುತ್ತಾರೆ ಎಂದು ನಾನು ನಂಬುತ್ತೇನೆ.

ಈ ಆಟಗಾರರು ಮುಂದಿನ ಪಂದ್ಯದಲ್ಲಿ ಉತ್ತಮ ರನ್ ಗಳಿಸಲು ಬಯಸುತ್ತಾರೆ. ಕೊಹ್ಲಿ ಐರ್ಲೆಂಡ್ ವಿರುದ್ಧ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಈಗ ಅವರಿಗೆ ಉತ್ತಮ ರನ್ ಗಳಿಸಲು ಪಾಕಿಸ್ತಾನಕ್ಕಿಂತ ಉತ್ತಮ ಅವಕಾಶ ಸಿಗುವುದಿಲ್ಲ ಎಂದಿದ್ದಾರೆ.

ಕೊಹ್ಲಿ ಬಗ್ಗೆ ಗವಾಸ್ಕರ್ ಈ ರೀತಿ ಹೇಳಿರುವುದು ಅಚ್ಚರಿ ತರಿಸಿದೆ. ಏಕೆಂದರೆ ಈ ಹಿಂದೆ ನಡೆದ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಅದ್ಭುತವಾಗಿ ಬ್ಯಾಟ್ ಬೀಸಿ ರನ್ಗಳ ಶಿಖರ್ ಕಟ್ಟಿದ್ದರ ಹೊರತಾಗಿಯೂ ಸುನಿಲ್ ಗವಾಸ್ಕರ್, ಕೊಹ್ಲಿಯ ಸ್ಟ್ರೈಕ್ ರೇಟ್ ಅನ್ನು ಕೇಂದ್ರಿಕರಿಸಿ ಟೀಕಾ ಪ್ರಹಾರ ನಡೆಸಿದ್ದರು.ಆದರೀಗ ಕೊಹ್ಲಿ ಪರ ಗವಾಸ್ಕರ್ ಅವರ ಮೃಧು ಧೋರಣೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ



















