T20 World Cup 2024: ಟಿ20 ವಿಶ್ವಕಪ್ಗೆ 8 ಆಟಗಾರರು ಕನ್ಫರ್ಮ್
T20 World Cup 2024: ಈ ಬಾರಿಯ ವಿಶ್ವಕಪ್ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್ಎ ಜಂಟಿಯಾಗಿ ಆಯೋಜಿಸಲಿದೆ. ಜೂನ್ 1 ರಿಂದ ಶುರುವಾಗಲಿರುವ ಟೂರ್ನಿಯ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ನ್ಯೂಯಾರ್ಕ್ನ ಹೊಸ ಸ್ಟೇಡಿಯಂ ಆತಿಥ್ಯವಹಿಸಲಿದೆ.
Updated on:Apr 15, 2024 | 2:21 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳ ಆಟಗಾರರ ಪಟ್ಟಿಯನ್ನು ಮೇ 1 ರೊಳಗೆ ಸಲ್ಲಿಸಬೇಕೆಂದು ಐಸಿಸಿ ತಿಳಿಸಿದೆ.

ಅದರಂತೆ ಇದೀಗ ಬಿಸಿಸಿಐ ಆಯ್ಕೆ ಸಮಿತಿ ಭಾರತ ತಂಡದ ಆಯ್ಕೆಗೆ ಮುಂದಾಗಿದೆ. ಈ ಆಯ್ಕೆಗಾಗಿ ಈ ಬಾರಿಯ ಐಪಿಎಲ್ನ ಪ್ರದರ್ಶನವನ್ನು ಸಹ ಪರಿಗಣನೆ ತೆಗೆದುಕೊಳ್ಳಲಾಗುತ್ತಿದ್ದು, ಹೀಗಾಗಿ ಆಯ್ಕೆ ಸಮಿತಿ ಸದಸ್ಯರು ಕೆಲ ಆಟಗಾರರ ಮೇಲೆ ಕಣ್ಣಿಟ್ಟಿದ್ದಾರೆ.

ಒಟ್ಟು 15 ಸದಸ್ಯರುಗಳ ಈ ತಂಡಕ್ಕಾಗಿ ಈಗಾಗಲೇ 8 ಆಟಗಾರರು ಫೈನಲ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನುಳಿದ 7 ಸ್ಥಾನಗಳಿಗೆ ಕೆಲ ಆಟಗಾರರ ನಡುವೆ ಪೈಪೋಟಿ ಮುಂದುವರೆದಿದ್ದು, ಹೀಗಾಗಿ ಏಪ್ರಿಲ್ ಕೊನೆಯ ವಾರದೊಳಗೆ ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ.

ಇತ್ತ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ರಿಂಕು ಸಿಂಗ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಹಾಗೂ ರಿಷಭ್ ಪಂತ್ ಹೆಸರು ಕಾಣಿಸಿಕೊಂಡಿದೆ.

ಹೀಗಾಗಿ ಈ ಎಂಟು ಆಟಗಾರರು ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇನ್ನುಳಿದ 7 ಆಟಗಾರರ ಸ್ಥಾನಗಳಿಗಾಗಿ ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಲ್, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶಿವಂ ದುಬೆ, ಅರ್ಷದೀಪ್ ಸಿಂಗ್, ಸಂಜು ಸ್ಯಾಮ್ಸನ್, ಮಯಾಂಕ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ ನಡುವೆ ನೇರ ಪೈಪೋಟಿ ಇದ್ದು, ಇವರಲ್ಲಿ ಯಾರಿಗೆ ಚಾನ್ಸ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
Published On - 2:21 pm, Mon, 15 April 24



















