T20 World Cup 2024: ಟಿ20 ವಿಶ್ವಕಪ್​ಗೆ 8 ಆಟಗಾರರು ಕನ್​ಫರ್ಮ್

| Updated By: ಝಾಹಿರ್ ಯೂಸುಫ್

Updated on: Apr 15, 2024 | 2:21 PM

T20 World Cup 2024: ಈ ಬಾರಿಯ ವಿಶ್ವಕಪ್​ ಅನ್ನು ವೆಸ್ಟ್ ಇಂಡೀಸ್ ಹಾಗೂ ಯುಎಸ್​ಎ ಜಂಟಿಯಾಗಿ ಆಯೋಜಿಸಲಿದೆ. ಜೂನ್ 1 ರಿಂದ ಶುರುವಾಗಲಿರುವ ಟೂರ್ನಿಯ ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಜೂನ್ 9 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕೆ ನ್ಯೂಯಾರ್ಕ್​ನ ಹೊಸ ಸ್ಟೇಡಿಯಂ ಆತಿಥ್ಯವಹಿಸಲಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಜೂನ್ 1 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳ ಆಟಗಾರರ ಪಟ್ಟಿಯನ್ನು ಮೇ 1 ರೊಳಗೆ ಸಲ್ಲಿಸಬೇಕೆಂದು ಐಸಿಸಿ ತಿಳಿಸಿದೆ.

2 / 5
ಅದರಂತೆ ಇದೀಗ ಬಿಸಿಸಿಐ ಆಯ್ಕೆ ಸಮಿತಿ ಭಾರತ ತಂಡದ ಆಯ್ಕೆಗೆ ಮುಂದಾಗಿದೆ. ಈ ಆಯ್ಕೆಗಾಗಿ ಈ ಬಾರಿಯ ಐಪಿಎಲ್​ನ ಪ್ರದರ್ಶನವನ್ನು ಸಹ ಪರಿಗಣನೆ ತೆಗೆದುಕೊಳ್ಳಲಾಗುತ್ತಿದ್ದು, ಹೀಗಾಗಿ ಆಯ್ಕೆ ಸಮಿತಿ ಸದಸ್ಯರು ಕೆಲ ಆಟಗಾರರ ಮೇಲೆ ಕಣ್ಣಿಟ್ಟಿದ್ದಾರೆ.

3 / 5
ಒಟ್ಟು 15 ಸದಸ್ಯರುಗಳ ಈ ತಂಡಕ್ಕಾಗಿ ಈಗಾಗಲೇ 8 ಆಟಗಾರರು ಫೈನಲ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನುಳಿದ 7 ಸ್ಥಾನಗಳಿಗೆ ಕೆಲ ಆಟಗಾರರ ನಡುವೆ ಪೈಪೋಟಿ ಮುಂದುವರೆದಿದ್ದು, ಹೀಗಾಗಿ ಏಪ್ರಿಲ್ ಕೊನೆಯ ವಾರದೊಳಗೆ ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ.

4 / 5
ಇತ್ತ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಜಸ್​ಪ್ರೀತ್ ಬುಮ್ರಾ, ರಿಂಕು ಸಿಂಗ್, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಹಾಗೂ ರಿಷಭ್ ಪಂತ್ ಹೆಸರು ಕಾಣಿಸಿಕೊಂಡಿದೆ.

5 / 5
ಹೀಗಾಗಿ ಈ ಎಂಟು ಆಟಗಾರರು ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇನ್ನುಳಿದ 7 ಆಟಗಾರರ ಸ್ಥಾನಗಳಿಗಾಗಿ ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಲ್, ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶಿವಂ ದುಬೆ, ಅರ್ಷದೀಪ್ ಸಿಂಗ್, ಸಂಜು ಸ್ಯಾಮ್ಸನ್, ಮಯಾಂಕ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ ನಡುವೆ ನೇರ ಪೈಪೋಟಿ ಇದ್ದು, ಇವರಲ್ಲಿ ಯಾರಿಗೆ ಚಾನ್ಸ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Published On - 2:21 pm, Mon, 15 April 24