- Kannada News Photo gallery Cricket photos T20 World Cup 2024 team india's record in west indies pitches kannada news
T20 World Cup 2024: ವಿಂಡೀಸ್ನ ಈ 3 ಮೈದಾನಗಳಲ್ಲಿ ಭಾರತದ ಪ್ರದರ್ಶನ ಹೇಗಿದೆ?
T20 World Cup 2024: ಸೂಪರ್ 8 ಸುತ್ತಿನಲ್ಲಿ ಅಫ್ಘಾನಿಸ್ತಾನ ಹಾಗೂ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಹಣಾಹಣಿ ನಿರ್ಧಾರವಾಗಿದ್ದು, ಮೂರನೇ ತಂಡ ಬಾಂಗ್ಲಾದೇಶ ಅಥವಾ ನೆದರ್ಲೆಂಡ್ಸ್ ಆಗಲಿದೆ. ಇಂತಹ ಪರಿಸ್ಥಿತಿಯಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆಯುವ ಈ ಮೂರು ಪಂದ್ಯಗಳ ಮೈದಾನಗಳಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ ಎನ್ನುವುದರ ಮೇಲೆ ಎಲ್ಲರ ಕಣ್ಣು.
Updated on: Jun 16, 2024 | 5:33 PM

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್‌ನಲ್ಲಿ ಸೂಪರ್ 8 ಸುತ್ತಿಗೆ ಅಜೇಯ ತಂಡವಾಗಿ ಎಂಟ್ರಿಕೊಟ್ಟಿದೆ. ಲೀಗ್ ಸುತ್ತಿನಲ್ಲಿ ಆಡಿದ ಮೂರೂ ಪಂದ್ಯಗಳನ್ನು ಗೆದ್ದಿರುವ ಭಾರತ ಇದೀಗ ವಿಂಡೀಸ್ ನಾಡಿನಲ್ಲಿ ತನ್ನ ಗೆಲುವಿನ ಓಟವನ್ನು ಮುಂದುವರೆಸುವ ಇರಾದೆಯಲ್ಲಿದೆ.

ವಾಸ್ತವವಾಗಿ ಟೀಂ ಇಂಡಿಯಾ ಲೀಗ್ ಸುತ್ತಿನ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲಿ ಆಡಿತ್ತು. ಇದೀಗ ಸೂಪರ್ 8 ಸುತ್ತಿನ ಎಲ್ಲಾ ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲ್ಲಿದ್ದು, ಅದಕ್ಕಾಗಿ ರೋಹಿತ್ ಪಡೆ ವಿಂಡೀಸ್ಗೆ ಪ್ರಯಾಣ ಬೆಳೆಸಲಿದೆ.

ಅಮೆರಿಕದಲ್ಲಿ ನಡೆದ ಎಲ್ಲ ಪಂದ್ಯಗಳು ಟೀಂ ಇಂಡಿಯಾದ ಹಲವು ಆಟಗಾರರಿಗೆ ಚೊಚ್ಚಲ ಪಂದ್ಯಗಳಾಗಿದ್ದವು. ಅಲ್ಲದೆ ಅಮೆರಿಕ ಪಿಚ್ಗಳಲ್ಲಿ ಭಾರತದ ಅನುಭವಿ ಆಟಗಾರರಿಗೂ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ಆದರೆ ವಿಂಡೀಸ್ ಪಿಚ್ನಲ್ಲಿ ಭಾರತದ ಹಲವು ಆಟಗಾರರು ಪಂದ್ಯಗಳನ್ನಾಡಿದ್ದಾರೆ. ಟೀಂ ಇಂಡಿಯಾ ಕೂಡ ಇಲ್ಲಿ ಹಲವವು ಪಂದ್ಯಗಳನ್ನು ಆಡಿದೆ.

ಸೂಪರ್ 8 ಸುತ್ತಿನಲ್ಲಿ ಅಫ್ಘಾನಿಸ್ತಾನ ಹಾಗೂ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾದ ಹಣಾಹಣಿ ನಿರ್ಧಾರವಾಗಿದ್ದು, ಮೂರನೇ ತಂಡ ಬಾಂಗ್ಲಾದೇಶ ಅಥವಾ ನೆದರ್ಲೆಂಡ್ಸ್ ಆಗಲಿದೆ. ಇಂತಹ ಪರಿಸ್ಥಿತಿಯಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆಯುವ ಈ ಮೂರು ಪಂದ್ಯಗಳ ಮೈದಾನಗಳಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ ಎನ್ನುವುದರ ಮೇಲೆ ಎಲ್ಲರ ಕಣ್ಣು.

ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಸೂಪರ್ 8 ರಲ್ಲಿ ಜೂನ್ 20 ರಂದು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡಬೇಕಾಗಿದೆ. ಈ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಇದುವರೆಗೆ 2 ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಸೋಲು ಕಂಡಿದೆ.

ಭಾರತ ತಂಡವು 2010 ರಲ್ಲಿ ಈ ಎರಡೂ ಪಂದ್ಯಗಳನ್ನು ಆಡಿದ್ದು, ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 49 ರನ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು ಮತ್ತು ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 14 ರನ್‌ಗಳಿಂದ ಸೋಲನ್ನು ಎದುರಿಸಬೇಕಾಯಿತು.

ಇದರ ನಂತರ, ಭಾರತ ತಂಡವು ಜೂನ್ 22 ರಂದು ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ತನ್ನ ಎರಡನೇ ಪಂದ್ಯವನ್ನು ಆಡಬೇಕಾಗಿದೆ. ಇಲ್ಲಿ ಟೀಮ್ ಇಂಡಿಯಾ ಮೊದಲ ಬಾರಿಗೆ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಆಡಲು ಸಜ್ಜಾಗಿದೆ. ಅಂದರೆ ಈ ಹಿಂದೆ ಈ ಮೈದಾನದಲ್ಲಿ ಭಾರತ ಯಾವುದೇ ಪಂದ್ಯವನ್ನಾಡಿಲ್ಲ.

ಭಾರತ ತಂಡವು ತನ್ನ ಮೂರನೇ ಪಂದ್ಯವನ್ನು ಆಸ್ಟ್ರೇಲಿಯಾ ತಂಡದ ವಿರುದ್ಧ ಜೂನ್ 24 ರಂದು ಸೇಂಟ್ ಲೂಸಿಯಾದ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಡಲಿದೆ. ಈ ಮೈದಾನದಲ್ಲಿ ಭಾರತ ತಂಡ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಆಡಿದ್ದು, 2ರಲ್ಲಿ ಗೆದ್ದಿದ್ದರೆ ಒಂದರಲ್ಲಿ ಸೋಲು ಕಂಡಿದೆ.




