
2024ರ ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಅಮೆರಿಕಕ್ಕೆ ಹಾರಿದೆ. ಮೊದಲ ಬ್ಯಾಚ್ನಲ್ಲಿ ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್ ಅವರಂತಹ ಆಟಗಾರರು ವಿಮಾನ ಹತ್ತಿದ್ದರು.

ಉಳಿದ ಆಟಗಾರರು ಎರಡನೇ ಬ್ಯಾಚ್ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಈ ಎರಡೂ ಬ್ಯಾಚ್ಗಳಲ್ಲಿ ಅಮೆರಿಕಕ್ಕೆ ತೆರಳುವುದು ಅನುಮಾನ ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ ಕೊಹ್ಲಿ ಕೂಡ ಮೊದಲ ಬ್ಯಾಚ್ನಲ್ಲಿ ಅಮೆರಿಕಕ್ಕೆ ಹೋಗಬೇಕಿತ್ತು. ಆದರೆ ಸ್ವಲ್ಪ ತಡವಾಗಿ ಕೊಹ್ಲಿ ತಂಡ ಸೇರಿಕೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್‌ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದು, ಕೊಹ್ಲಿ ಅವರು ಸ್ವಲ್ಪ ತಡವಾಗಿ ತಂಡವನ್ನು ಸೇರಿಕೊಳ್ಳುವುದಾಗಿ ಹೇಳಿದ್ದಾರೆ. ಬಿಸಿಸಿಐ ಅವರ ಮನವಿಯನ್ನು ಗೌರವಿಸಿದೆ. ಆದ್ದರಿಂದ, ಅವರ ವೀಸಾ ನೇಮಕಾತಿಯ ದಿನಾಂಕವನ್ನು ಸಹ ವಿಸ್ತರಿಸಲಾಗಿದೆ ಎಂದಿದ್ದಾರೆ.

ಬಿಸಿಸಿಐ ಅಧಿಕಾರಿಯನ್ನು ಉಲ್ಲೇಖಿಸಿ ವರದಿಯಲ್ಲಿ ಬರೆಯಲಾದ ಪ್ರಕಾರ, ಮೇ 30 ರೊಳಗೆ ವಿರಾಟ್ ನ್ಯೂಯಾರ್ಕ್‌ಗೆ ತೆರಳಬಹುದು ಎಂದು ಹೇಳಲಾಗುತ್ತಿದೆ. ಇದರರ್ಥ ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯವನ್ನು ಆಡುವುದಿಲ್ಲ ಎಂಬುದು ಖಚಿತವಾಗಿದೆ.

2024ರ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಜೂನ್ 1ರಂದು ಆಡಬೇಕಿದೆ. ಆದರೆ, ಮೇ 30 ರಂದು ವಿರಾಟ್ ನ್ಯೂಯಾರ್ಕ್‌ಗೆ ತೆರಳುವ ಸಾಧ್ಯತೆಗಳಿವೆ. ಹೀಗಾಗಿ ಕೊಹ್ಲಿ ಅಭ್ಯಾಸ ಪಂದ್ಯದಲ್ಲಿ ಆಡುವ ಸಾಧ್ಯತೆಗಳು ಕಡಿಮೆ ಇದ್ದು, ಜೂನ್ 5 ರಂದು ಐರ್ಲೆಂಡ್ ವಿರುದ್ಧ ನಡೆಯಲ್ಲಿರುವ ಪಂದ್ಯದಲ್ಲಿ ಕೊಹ್ಲಿ ಆಡುವುದನ್ನು ಕಾಣಬಹುದಾಗಿದೆ.