AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​​ನಲ್ಲಿ ಕಣಕ್ಕಿಳಿಯುವ 20 ತಂಡಗಳ ಪಟ್ಟಿ ಇಲ್ಲಿದೆ

T20 World Cup 2026 All Teams: ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಾಗಿ ವಿಂಗಡಿಸಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. ಅದರಂತೆ ಮೊದಲ ಸುತ್ತಿನ ಬಳಿಕ ಸೂಪರ್- 10 ಪಂದ್ಯಗಳು ನಡೆಯುವ ಸಾಧ್ಯತೆಯಿದೆ. ಇದಾದ ಬಳಿಕ ಸೆಮಿಫೈನಲ್ ಹಾಗೂ ಫೈನಲ್ ಮ್ಯಾಚ್ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Oct 26, 2025 | 8:54 AM

Share
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ಗೆ 20 ತಂಡಗಳು ಫೈನಲ್​ ಆಗಿವೆ. ಈ ಇಪ್ಪತ್ತು ತಂಡಗಳಲ್ಲಿ 2 ತಂಡಗಳು ಆತಿಥ್ಯ ರಾಷ್ಟ್ರದ ಅಡಿಯಲ್ಲಿ ಅರ್ಹತೆ ಪಡೆದರೆ, ಇನ್ನುಳಿದ 10 ಟೀಮ್​​​​ಗಳು ಟಿ20 ರ್ಯಾಂಕಿಂಗ್ ಮೂಲಕ ಆಯ್ಕೆಯಾಗಿದೆ. ಇನ್ನುಳಿದ 8 ತಂಡಗಳು ಅರ್ಹತಾ ಸುತ್ತಿನ ಮೂಲಕ ಟಿ20 ವಿಶ್ವಕಪ್​​ಗೆ ಅರ್ಹತೆ ಪಡೆದುಕೊಂಡಿದೆ.

1 / 7
ಇಲ್ಲಿ ಅರ್ಹತಾ ಸುತ್ತಿನ ಮೂಲಕ ಕ್ವಾಲಿಫೈ ಆಗಿರುವ ತಂಡಗಳೆಂದರೆ ನೇಪಾಳ, ಒಮಾನ್, ಕೆನಡಾ, ಇಟಲಿ, ನಮೀಬಿಯಾ, ಝಿಂಬಾಬ್ವೆ, ಯುಎಇ ಮತ್ತು ನೆದರ್​ಲೆಂಡ್ಸ್​. ಅಮೆರಿಕ ಪ್ರಾದೇಶಿಕ ಅರ್ಹತಾ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕೆನಡಾ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು. ಈ ಮೂಲಕ ಮುಂಬರುವ ಟಿ20 ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.

2 / 7
ಇನ್ನು ಯುರೋಪ್ ಪ್ರಾದೇಶಿಕ ಅರ್ಹತಾ ಸುತ್ತಿನಲ್ಲಿ ಪಂದ್ಯಗಳಲ್ಲಿ ನೆದರ್​ಲೆಂಡ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಭಾರತ-ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ನೆದರ್​ಲೆಂಡ್ಸ್ ಪಡೆ ಯಶಸ್ವಿಯಾಗಿದೆ.

3 / 7
ಅತ್ತ ಸ್ಕಾಟ್ಲೆಂಡ್ ತಂಡವನ್ನು ಬಗ್ಗು ಬಡಿಯುವ ಮೂಲಕ ಈ ಬಾರಿ ಇಟಲಿ ತಂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ವಿಶೇಷ ಎಂದರೆ ಕಳೆದ ಬಾರಿ ಸ್ಕಾಟ್ಲೆಂಡ್​ ಟಿ20 ವಿಶ್ವಕಪ್ ಆಡಿತ್ತು. ಆದರೆ ಈ ಬಾರಿ ಸ್ಕಾಟಿಷ್ ಪಡೆಯ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಯುರೋಪ್​ನಿಂದ ಇಟಲಿ ತಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

4 / 7
ಇನ್ನು ಆಫ್ರಿಕಾ ಅರ್ಹತಾ ಸುತ್ತಿನ ವಿಭಾಗದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ನಮೀಬಿಯಾ ಹಾಗೂ ಝಿಂಬಾಬ್ವೆ ತಂಡಗಳು ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ಹಾಗೂ ನಮೀಬಿಯಾ ತಂಡಗಳು ಕೂಡ ಕಾಣಿಸಿಕೊಳ್ಳಲಿದೆ.

5 / 7
ಇದರ ಜೊತೆಗೆ ಏಷ್ಯಾ/ಪೂರ್ವ ಏಷ್ಯಾ-ಪೆಸಿಫಿಕ್ ಪ್ರಾದೇಶಿಕ ಅರ್ಹತಾ ಸುತ್ತಿನ ಮೂಲಕ ನೇಪಾಳ, ಯುಎಇ ಹಾಗೂ ಒಮಾನ್ ತಂಡಗಳು ಕೂಡ ಟಿ20 ವಿಶ್ವಕಪ್​ಗೆ ಎಂಟ್ರಿ ಕೊಟ್ಟಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿರುವ 20 ತಂಡಗಳು ಈ ಕೆಳಗಿನಂತಿವೆ...

6 / 7
ಭಾರತ,  ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್ ಮತ್ತು ಯುಎಇ.

7 / 7
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ

ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್

ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು

ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ

ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​