AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಟಿ20 ವಿಶ್ವಕಪ್ ಫೈನಲ್

India-NZ T20 World Cup 2026 Final:2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಹಮದಾಬಾದ್‌ನಲ್ಲಿ ಮುಖಾಮುಖಿಯಾಗಲಿವೆ. ಇದು ಉಭಯ ತಂಡಗಳ ಮೊದಲ ಟಿ20 ವಿಶ್ವಕಪ್ ಫೈನಲ್ ಪಂದ್ಯವಾಗಿದೆ. ಭಾರತ ಹಾಲಿ ಚಾಂಪಿಯನ್ ಆಗಿದ್ದರೆ, ನ್ಯೂಜಿಲೆಂಡ್ ಮೊದಲ ಪ್ರಶಸ್ತಿಯ ನಿರೀಕ್ಷೆಯಲ್ಲಿದೆ. ಈ ಹಿಂದೆ ಟೆಸ್ಟ್ ಮತ್ತು ಏಕದಿನ ಫೈನಲ್‌ಗಳಲ್ಲಿ ಎದುರಾಗಿದ್ದ ಈ ತಂಡಗಳು, ಇದೀಗ ಟಿ20 ಸ್ವರೂಪದಲ್ಲೂ ಇತಿಹಾಸ ನಿರ್ಮಿಸಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಪೃಥ್ವಿಶಂಕರ
|

Updated on: Mar 06, 2026 | 7:36 PM

Share
2026 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯವು ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮೊದಲ ಬಾರಿಗೆ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಈ ಫೈನಲ್ ಪಂದ್ಯದ ಮತ್ತೊಂದು ವಿಶೇಷ ಕ್ಷಣವಾಗಿದೆ.

1 / 5
ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ ಸತತ ಎರಡನೇ ಪ್ರಶಸ್ತಿಯತ್ತ ಗುರಿ ಇಟ್ಟಿದೆ. ಇತ್ತ ನ್ಯೂಜಿಲೆಂಡ್ ತನ್ನ ಮೊದಲ ಟಿ20 ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ. ಇನ್ನೊಂದು ಗಮನಿಸಬೇಕಾದ ಸಂಗತಿಯೆಂದರೆ ಐಸಿಸಿಯ ಮೂರು ಮಾದರಿಗಳ ಫೈನಲ್‌ನಲ್ಲಿ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಭಾರತ ಮತ್ತು ನ್ಯೂಜಿಲೆಂಡ್ ಈ ಹಿಂದೆ ಏಕದಿನ ಮತ್ತು ಟೆಸ್ಟ್ ಟೂರ್ನಿಗಳ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು ಈಗ ಟಿ20 ಸ್ವರೂಪದಲ್ಲೂ ಉಭಯ ತಂಡಗಳು ಎದುರುಬದುರಾಗುತ್ತಿವೆ.

2 / 5
2021 ರಲ್ಲಿ ಸೌತಾಂಪ್ಟನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಉಭಯ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ನ್ಯೂಜಿಲೆಂಡ್, ಭಾರತವನ್ನು 8 ವಿಕೆಟ್‌ಗಳಿಂದ ಸೋಲಿಸಿ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಕೈಲ್ ಜೇಮಿಸನ್ ಮತ್ತು ಕೇನ್ ವಿಲಿಯಮ್ಸನ್ ಅವರ ಅದ್ಭುತ ಪ್ರದರ್ಶನದಿಂದಾಗಿ ಬ್ಲಾಕ್ ಕ್ಯಾಪ್ಸ್ ಇತಿಹಾಸ ನಿರ್ಮಿಸಿತು.

3 / 5
ಆನಂತರ 2025 ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದುಬೈನಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯ (ODI ಸ್ವರೂಪದ ಪಂದ್ಯಾವಳಿ) ಫೈನಲ್ ಪಂದ್ಯ ನಡೆಯಿತು. ಈ ಪಂದ್ಯವನ್ನು ಭಾರತ 4 ವಿಕೆಟ್‌ಗಳಿಂದ ಗೆದ್ದು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ರೋಹಿತ್ ಶರ್ಮಾ ನಾಯಕತ್ವದಲ್ಲಿ, ತಂಡವು ಪಂದ್ಯಾವಳಿಯಲ್ಲಿ ಅಜೇಯವಾಗಿ ಉಳಿದು ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ವಶಪಡಿಸಿಕೊಂಡಿತು.

4 / 5
ಇದೀಗ 2026 ರ ಟಿ20 ವಿಶ್ವಕಪ್‌ನಲ್ಲಿ ಎರಡು ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆಯಾದರೂ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ವಾಸ್ತವವಾಗಿ, ಈ ಪಂದ್ಯಾವಳಿಯಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಎರಡೂ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದು, ಟೀಂ ಇಂಡಿಯಾ ಮೂರು ಬಾರಿಯೂ ಸೋತಿದೆ. ಹೀಗಾಗಿ ಭಾರತಕ್ಕೆ ತನ್ನ ಸೋಲಿನ ಸರಣಿಯನ್ನು ಮುರಿಯಲು ಒಂದೊಳ್ಳೆ ಅವಕಾಶ ಸಿಕ್ಕಿದೆ.

5 / 5
Follow Us