- Kannada News Photo gallery Cricket photos T20 World Cup 2026 Schedule: 20 teams and 29 days tournament
20 ತಂಡಗಳು 29 ದಿನಗಳು: ಹೇಗಿರಲಿದೆ ಟಿ20 ವಿಶ್ವಕಪ್ ಟೂರ್ನಿ?
T20 World Cup 2026 Schedule: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್ಎ, ಕೆನಡಾ, ನೆದರ್ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್ ಮತ್ತು ಯುಎಇ.
Updated on: Nov 26, 2025 | 7:10 AM

T20 World Cup 2026: ಟಿ20 ವಿಶ್ವಕಪ್ 2026ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ಕ್ರಿಕೆಟ್ ಕದನ ಮಾರ್ಚ್ 8 ರಂದು ಮುಗಿಯಲಿದೆ. ಅಂದರೆ ಬರೋಬ್ಬರಿ 29 ದಿನಗಳ ಕಾಲ ಟಿ20 ವಿಶ್ವಕಪ್ ಟೂರ್ನಮೆಂಟ್ ನಡೆಯಲಿದೆ. ವಿಶೇಷ ಎಂದರೆ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್ನಲ್ಲಿ 20 ತಂಡಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಹೀಗಾಗಿಯೇ ಈ ಬಾರಿ ಟೂರ್ನಿ ಹೇಗಿರಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ.

20 ತಂಡಗಳನ್ನು 4 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಪ್ರತಿ ಗ್ರೂಪ್ಗಳಲ್ಲಿ 5 ತಂಡಗಳಿವೆ. ಈ ಐದು ತಂಡಗಳ ನಡುವೆ ಮೊದಲ ಸುತ್ತಿನ ಪಂದ್ಯಗಳು ನಡೆಯಲಿದೆ. ಅಂದರೆ ಗ್ರೂಪ್-1 ರಲ್ಲಿ ಇರುವ ಭಾರತ ತಂಡವು ಯುಎಸ್ಎ, ನಮೀಬಿಯಾ ಪಾಕಿಸ್ತಾನ್ ಮತ್ತು ನೆದರ್ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಈ ರೀತಿಯಲ್ಲಿ ಎಲ್ಲಾ ತಂಡಗಳು ತಮ್ಮ ಗ್ರೂಪ್ಗಳಲ್ಲಿರುವ ತಂಡಗಳ ವಿರುದ್ಧ ತಲಾ 4 ಮ್ಯಾಚ್ಗಳನ್ನಾಡಲಿದೆ.

ಇಲ್ಲಿ ಎಲ್ಲಾ ಗ್ರೂಪ್ಗಳಿಗೂ ಭಿನ್ನ ಅಂಕ ಪಟ್ಟಿ ಇರಲಿದೆ. ಈ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಮುಂದಿನ ಹಂತಕ್ಕೇರಲಿದೆ. ಅಂದರೆ ಗ್ರೂಪ್-2 ರಲ್ಲಿ ಆಸ್ಟ್ರೇಲಿಯಾ, ಶ್ರೀಲಂಕಾ, ಒಮಾನ್, ಐರ್ಲೆಂಡ್, ಝಿಂಬಾಬ್ವೆ ತಂಡಗಳಿವೆ. ಈ ತಂಡಗಳಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆಲ್ಲುವ ಎರಡು ತಂಡಗಳು ಗ್ರೂಪ್-2 ರ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದೆ. ಹೀಗೆ ಎಲ್ಲಾ ಗ್ರೂಪ್ಗಳ ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ಎಲ್ಲಾ ಟೀಮ್ಗಳು ಮುಂದಿನ ಹಂತಕ್ಕೇರಲಿದೆ.

ಎಲ್ಲಾ ಗ್ರೂಪ್ಗಳಿಂದ ತಲಾ 2 ತಂಡಗಳಂತೆ ಒಟ್ಟು 8 ಟೀಮ್ಗಳು ದ್ವಿತೀಯ ಸುತ್ತಿಗೆ ಪ್ರವೇಶಿಸುತ್ತದೆ. ಅದರಂತೆ ದ್ವಿತೀಯ ಸುತ್ತಿನಲ್ಲಿ ಒಟ್ಟು 8 ತಂಡಗಳು ಒಂದೇ ಗ್ರೂಪ್ನಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿಯೇ ಈ ಸುತ್ತನ್ನು ಸೂಪರ್-8 ರೌಂಡ್ ಎಂದು ಕರೆಯಲಾಗುತ್ತದೆ. ಸೂಪರ್-8 ಸುತ್ತಿನಲ್ಲಿ ಒಂದೇ ಪಾಯಿಂಟ್ಸ್ ಟೇಬಲ್ ಇರಲಿದ್ದು, ಈ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ತಂಡಗಳು ಸೆಮಿಫೈನಲ್ಗೇರಲಿದೆ.

ಅದರಂತೆ ಸೆಮಿಫೈನಲ್ನಲ್ಲಿ ಒಟ್ಟು ನಾಲ್ಕು ತಂಡಗಳು ಕಾಣಿಸಿಕೊಳ್ಳಲಿದೆ. ಇಲ್ಲಿ ಸೂಪರ್-8 ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ತಂಡವು ನಾಲ್ಕನೇ ಸ್ಥಾನ ಪಡೆದ ತಂಡವನ್ನು ಎದುರಿಸಲಿದೆ. ಹಾಗೆಯೇ ಸೂಪರ್-8 ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ತಂಡ ಮೂರನೇ ಸ್ಥಾನ ಪಡೆದ ತಂಡವನ್ನು ಎದುರಿಸಲಿದೆ.

ಮೊದಲ ಸೆಮಿಫೈನಲ್ ಪಂದ್ಯವು ಮಾರ್ಚ್ 4 ರಂದು ನಡೆಯಲಿದ್ದು, ದ್ವಿತೀಯ ಸೆಮಿಫೈನಲ್ ಪಂದ್ಯವು ಮಾರ್ಚ್ 5 ರಂದು ಜರುಗಲಿದೆ. ಈ ಪಂದ್ಯಗಳಲ್ಲಿ ಗೆಲ್ಲುವ ಎರಡು ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗಲಿದೆ. ಅದರಂತೆ ಫೈನಲ್ ಪಂದ್ಯವು ಮಾರ್ಚ್ 8 ರಂದು ಅಹಮದಾಬಾದ್ ಅಥವಾ ಕೊಲಂಬೊದಲ್ಲಿ ನಡೆಯಲಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
