- Kannada News Photo gallery Cricket photos T20 World Cup 2026: Sean Abbott named as Australia's travelling reserve
ಆಸ್ಟ್ರೇಲಿಯಾದ ಪ್ರಮುಖ ಆಟಗಾರ ಅನ್ಫಿಟ್: ಘಾತಕ ವೇಗಿ ಎಂಟ್ರಿ..!
T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ಆಸೀಸ್ ಪಡೆ ಆರಂಭಿಕ ಮ್ಯಾಚ್ಗಳಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆಯಿದೆ.
Updated on: Feb 03, 2026 | 10:16 AM

ಫೆಬ್ರವರಿ 7 ರಿಂದ ಪ್ರಾರಂಭವಾಗಲಿರುವ ಟಿ20 ವಿಶ್ವಕಪ್ಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹೇಝಲ್‌ವುಡ್ ಗಾಯದಿಂದ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ಹೀಗಾಗಿ ಜೋಶ್ ಹೇಝಲ್‌ವುಡ್ ಇನ್ನೂ ಸಹ ಆಸ್ಟ್ರೇಲಿಯಾ ವಿಶ್ವಕಪ್ ತಂಡವನ್ನು ಕೂಡಿಕೊಂಡಿಲ್ಲ. ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣವಾಗಿ ಗುಣಮುಖರಾಗಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಅಂದರೆ ಜೋಶ್ ಹೇಝಲ್‌ವುಡ್ ಟಿ20 ವಿಶ್ವಕಪ್ ಆಡುವುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯೇ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಶಾನ್ ಅಬಾಟ್ ಅವರನ್ನು ಮೀಸಲು ಆಟಗಾರನಾಗಿ ಟಿ20 ವಿಶ್ವಕಪ್ಗೆ ಆಯ್ಕೆ ಮಾಡಿದೆ. ಅಂದರೆ ಹೇಝಲ್‌ವುಡ್ ಹೊರಗುಳಿದರೆ ಶಾನ್ ಅಬಾಟ್ಗೆ ಅವಕಾಶ ಸಿಗಲಿದೆ.

ಘಾತಕ ವೇಗಿಯಾಗಿ ಗುರುತಿಸಿಕೊಂಡಿರುವ ಶಾನ್ ಅಬಾಟ್ ಆಸ್ಟ್ರೇಲಿಯಾ ಪರ ಈವರೆಗೆ 28 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 34 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಈ ಬಾರಿಯ ಬಿಗ್ ಬ್ಯಾಷ್ ಲೀಗ್ನಲ್ಲಿ ಅಬಾಟ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಹೀಗಾಗಿಯೇ ಇದೀಗ ಬಲಗೈ ವೇಗಿಯನ್ನು ಟಿ20 ವಿಶ್ವಕಪ್ ತಂಡಕ್ಕೆ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿದೆ.

ಇನ್ನೊಂದೆಡೆ ಪ್ಯಾಟ್ ಕಮಿನ್ಸ್ ಬೆನ್ನಿನ ಕೆಳ ಭಾಗದ ನೋವಿನ ಕಾರಣ ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಇದರ ಬೆನ್ನಲ್ಲೇ ಜೋಶ್ ಹೇಝಲ್‌ವುಡ್ ಅವರ ಗಾಯದ ಸಮಸ್ಯೆ ಕೂಡ ಆಸ್ಟ್ರೇಲಿಯಾ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಈ ಇಬ್ಬರು ಪ್ರಮುಖ ವೇಗಿಗಳಿಲ್ಲದೆ ಆಸ್ಟ್ರೇಲಿಯಾ ತಂಡವು ಆರಂಭಿಕ ಪಂದ್ಯಗಳಲ್ಲಿ ಹೇಗೆ ದಾಳಿ ಸಂಘಟಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಟಿ20 ವಿಶ್ವಕಪ್ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. ಶಾನ್ ಅಬಾಟ್ (ಮೀಸಲು ಆಟಗಾರ).
