AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ಪ್ರಮುಖ ಆಟಗಾರ ಅನ್​ಫಿಟ್​: ಘಾತಕ ವೇಗಿ ಎಂಟ್ರಿ..!

T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ಆಸೀಸ್ ಪಡೆ ಆರಂಭಿಕ ಮ್ಯಾಚ್​ಗಳಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Feb 03, 2026 | 10:16 AM

Share
ಫೆಬ್ರವರಿ 7 ರಿಂದ ಪ್ರಾರಂಭವಾಗಲಿರುವ ಟಿ20 ವಿಶ್ವಕಪ್​ಗಾಗಿ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಗಾಯದಿಂದ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

1 / 6
ಹೀಗಾಗಿ ಜೋಶ್ ಹೇಝಲ್​ವುಡ್ ಇನ್ನೂ ಸಹ ಆಸ್ಟ್ರೇಲಿಯಾ ವಿಶ್ವಕಪ್ ತಂಡವನ್ನು ಕೂಡಿಕೊಂಡಿಲ್ಲ. ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣವಾಗಿ ಗುಣಮುಖರಾಗಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

2 / 6
ಅಂದರೆ ಜೋಶ್ ಹೇಝಲ್​ವುಡ್ ಟಿ20 ವಿಶ್ವಕಪ್ ಆಡುವುದು ಇನ್ನೂ ಸಹ ಖಚಿತವಾಗಿಲ್ಲ. ಹೀಗಾಗಿಯೇ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಶಾನ್ ಅಬಾಟ್ ಅವರನ್ನು ಮೀಸಲು ಆಟಗಾರನಾಗಿ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದೆ. ಅಂದರೆ ಹೇಝಲ್​ವುಡ್ ಹೊರಗುಳಿದರೆ ಶಾನ್ ಅಬಾಟ್​ಗೆ ಅವಕಾಶ ಸಿಗಲಿದೆ.

3 / 6
ಘಾತಕ ವೇಗಿಯಾಗಿ ಗುರುತಿಸಿಕೊಂಡಿರುವ ಶಾನ್ ಅಬಾಟ್ ಆಸ್ಟ್ರೇಲಿಯಾ ಪರ ಈವರೆಗೆ 28 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 34 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಈ ಬಾರಿಯ ಬಿಗ್ ಬ್ಯಾಷ್​ ಲೀಗ್​ನಲ್ಲಿ ಅಬಾಟ್ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಹೀಗಾಗಿಯೇ ಇದೀಗ ಬಲಗೈ ವೇಗಿಯನ್ನು ಟಿ20 ವಿಶ್ವಕಪ್ ತಂಡಕ್ಕೆ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿದೆ.

4 / 6
ಇನ್ನೊಂದೆಡೆ ಪ್ಯಾಟ್ ಕಮಿನ್ಸ್ ಬೆನ್ನಿನ ಕೆಳ ಭಾಗದ ನೋವಿನ ಕಾರಣ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಇದರ ಬೆನ್ನಲ್ಲೇ ಜೋಶ್ ಹೇಝಲ್​ವುಡ್ ಅವರ ಗಾಯದ ಸಮಸ್ಯೆ ಕೂಡ ಆಸ್ಟ್ರೇಲಿಯಾ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಈ ಇಬ್ಬರು ಪ್ರಮುಖ ವೇಗಿಗಳಿಲ್ಲದೆ ಆಸ್ಟ್ರೇಲಿಯಾ ತಂಡವು ಆರಂಭಿಕ ಪಂದ್ಯಗಳಲ್ಲಿ ಹೇಗೆ ದಾಳಿ ಸಂಘಟಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 6
ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. ಶಾನ್ ಅಬಾಟ್ (ಮೀಸಲು ಆಟಗಾರ).

6 / 6
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ

ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್

ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು

ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!

ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?

ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ