ನಾಕೌಟ್ನಲ್ಲಿ ನಾಲ್ಕು ತಂಡಗಳು: ಇಲ್ಲಿದೆ ವೇಳಾಪಟ್ಟಿ
T20 World Cup 2026: ಟಿ20 ವಿಶ್ವಕಪ್ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಸೆಮಿಫೈನಲ್ಗೆ ಪ್ರವೇಶಿಸಿದೆ. ಅದರಂತೆ ಸೆಮಿಫೈನಲ್ ಸುತ್ತಿನಲ್ಲಿ ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಎರಡು ಟೀಮ್ ಇಂಡಿಯಾ ಫೈನಲ್ ಆಡಲಿದೆ.
Updated on: Mar 02, 2026 | 8:54 AM

T20 World Cup 2026: 20 ತಂಡಗಳೊಂದಿಗೆ ಶುರುವಾದ ಟಿ20 ವಿಶ್ವಕಪ್ನಲ್ಲಿ ಈಗ ಉಳಿದಿರುವುದು ಕೇವಲ 4 ತಂಡಗಳು ಮಾತ್ರ. ಇನ್ನುಳಿದ 16 ತಂಡಗಳ ವಿಶ್ವಕಪ್ ಅಭಿಯಾನ ಅಂತ್ಯವಾಗಿದೆ. ಈ ನಾಲ್ಕು ತಂಡಗಳು ನಾಕೌಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಅಂದರೆ ಸೆಮಿಫೈನಲ್ನಲ್ಲಿ ಕಣಕ್ಕಿಳಿಯಲಿದೆ.

ಸೆಮಿಫೈನಲ್ ಪಂದ್ಯಗಳು ಮಾರ್ಚ್ 4 ಮತ್ತು 5 ರಂದು ನಡೆಯಲಿದ್ದು, ಇಲ್ಲಿ ಭಾರತ, ಇಂಗ್ಲೆಂಡ್, ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಅಂದರೆ ಗ್ರೂಪ್- 1 ರಿಂದ ಸೆಮಿಫೈನಲ್ಗೇರಿರುವ ತಂಡಗಳು ಗ್ರೂಪ್-2 ನಿಂದ ಅರ್ಹತೆ ಪಡೆದ ತಂಡಗಳ ವಿರುದ್ಧ ಸೆಣಸಲಿದೆ.

ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ಗೆ ಪ್ರವೇಶಿಸಲಿದೆ.

ಮಾರ್ಚ್ 5 ರಂದು ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯಗಳಿಸುವ ತಂಡ ಟಿ20 ವಿಶ್ವಕಪ್ನ ಫೈನಲ್ಗೇರಲಿದೆ.

ಟಿ20 ವಿಶ್ವಕಪ್ನ ಫೈನಲ್ ಪಂದ್ಯವು ಮಾರ್ಚ್ 8 ರಂದು, ಭಾನುವಾರ ನಡೆಯಲಿದೆ. ಈ ಮಹಾ ಸಮರಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಭಾರತ/ಸೌತ್ ಆಫ್ರಿಕಾ/ ಇಂಗ್ಲೆಂಡ್/ನ್ಯೂಝಿಲೆಂಡ್ ಈ ನಾಲ್ಕು ತಂಡಗಳಲ್ಲಿ ಒಂದು ಟೀಮ್ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




