T20 World Cup 2026: ಟಿ20 ವಿಶ್ವಕಪ್​​ಗೆ ಡೇಟ್ ಫಿಕ್ಸ್​

Updated on: Nov 10, 2025 | 8:46 AM

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ 20 ತಂಡಗಳು ಭಾಗವಹಿಸಲಿವೆ. ಈ ತಂಡಗಳ ನಡುವಣ ಕದನವು ​ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದ್ದು, ಇದಕ್ಕಾಗಿ ದಿನಾಂಕವನ್ನು ನಿಗದಿ ಮಾಡಲಾಗಿದೆ. ಅಲ್ಲದೆ ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗಲಿದೆ.

1 / 6
T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್​​ಗೆ ದಿನಾಂಕ ನಿಗದಿಯಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಚುಟುಕು ಕ್ರಿಕೆಟ್ ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್​​ಗೆ ದಿನಾಂಕ ನಿಗದಿಯಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಚುಟುಕು ಕ್ರಿಕೆಟ್ ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

2 / 6

ಇನ್ನು ಫೈನಲ್ ಪಂದ್ಯವು ಮಾರ್ಚ್ 8 ರಂದು ನಡೆಯಲಿದೆ. ಈ ಪಂದ್ಯ ಕೂಡ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಆಯೋಜಿಸಲಾಗುತ್ತದೆ. ಒಂದು ವೇಳೆ ಪಾಕಿಸ್ತಾನ್ ತಂಡ ಫೈನಲ್​​ಗೆ ತಲುಪಿದರೆ ಅಂತಿಮ ಪಂದ್ಯ ಕೊಲಂಬೊದ ಆರ್.​ ಪ್ರೇಮದಾಸ ಸ್ಟೇಡಿಯಂನಲ್ಲಿ ಜರುಗಲಿದೆ.

3 / 6

ಏಕೆಂದರೆ ಪಾಕಿಸ್ತಾನ್ ತಂಡವು ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಟೀಮ್ ಇಂಡಿಯಾ ಪಾಕ್​​ನಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ನಿರಾಕರಿಸಿದ್ದರಿಂದ ಪಾಕಿಸ್ತಾನ್ ತಂಡ ಭಾರತದಲ್ಲಿ ಯಾವುದೇ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದೆ. ಹೀಗಾಗಿ ಪಾಕ್ ತಂಡದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ.

4 / 6

ಅದರಂತೆ ಮುಂಬರುವ ಟಿ20 ವಿಶ್ವಕಪ್​​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಶ್ರೀಲಂಕಾದಲ್ಲಿ ಮುಖಾಮುಖಿಯಾಗಲಿದೆ. ಅಲ್ಲದೆ ಪಾಕಿಸ್ತಾನ್ ತಂಡವು ಫೈನಲ್​​ಗೆ ತಲುಪಿದರೆ ಮಾರ್ಚ್ 8 ರಂದು ಕೊಲಂಬೊದಲ್ಲಿ ಫೈನಲ್​​ ಪಂದ್ಯವನ್ನು ಆಯೋಜಿಸಲಾಗುತ್ತದೆ.

5 / 6

ಇನ್ನು ಒಂದು ಸೆಮಿಫೈನಲ್ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಇನ್ನೊಂದು ಪಂದ್ಯಕ್ಕೆ ಸ್ಥಳ ನಿಗದಿ ಮಾಡಲಾಗಿಲ್ಲ. ಏಕೆಂದರೆ ಪಾಕಿಸ್ತಾನ್ ತಂಡ ಸೆಮಿಫೈನಲ್​​ಗೆ ತಲುಪಿದರೆ ಆ ಪಂದ್ಯವನ್ನು ಶ್ರೀಲಂಕಾದಲ್ಲಿ ಆಯೋಜಿಸಬೇಕಾಗುತ್ತದೆ. ಅದರಂತೆ ಫೆಬ್ರವರಿ 7 ರಿಂದ ಮಾರ್ಚ್ 8 ನಡುವೆ ಮುಂಬರುವ ಟಿ20 ವಿಶ್ವಕಪ್ ಆಯೋಜಿಸಲು ಐಸಿಸಿ ಮತ್ತು ಬಿಸಿಸಿಐ ನಿರ್ಧರಿಸಿದ್ದು, ಶೀಘ್ರದಲ್ಲೇ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗಲಿದೆ.

6 / 6

ಟಿ20 ವಿಶ್ವಕಪ್​​ನಲ್ಲಿ ಕಣಕ್ಕಿಳಿಯುವ ತಂಡಗಳು: ಭಾರತ, ಶ್ರೀಲಂಕಾ, ಪಾಕಿಸ್ತಾನ್, ಬಾಂಗ್ಲಾದೇಶ್, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಐರ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಸೌತ್ ಆಫ್ರಿಕಾ, ಯುಎಸ್​ಎ, ಕೆನಡಾ, ನೆದರ್​ಲೆಂಡ್ಸ್, ಇಟಲಿ, ನಮೀಬಿಯಾ, ಝಿಂಬಾಬ್ವೆ, ನೇಪಾಳ, ಒಮಾನ್ ಮತ್ತು ಯುಎಇ.

Published On - 7:53 am, Mon, 10 November 25

Loading...
Unable to load recommendations.
Follow Us