ಸ್ಟೀವ್ ಸ್ಮಿತ್ ಬರುವಷ್ಟರಲ್ಲಿ ವಿಶ್ವಕಪ್​ನಿಂದಲೇ ಹೊರಬಿದ್ದ ಆಸ್ಟ್ರೇಲಿಯಾ

Updated on: Feb 18, 2026 | 1:57 PM

T20 World Cup 2026: ಟಿ20 ವಿಶ್ವಕಪ್​ 2026 ರಲ್ಲಿ ಆಸ್ಟ್ರೇಲಿಯಾ ತಂಡ ಈವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಆ ಬಳಿಕ ಝಿಂಬಾಬ್ವೆ ಹಾಗೂ ಶ್ರೀಲಂಕಾ ವಿರುದ್ಧ ಸೋಲನುಭವಿಸಿದೆ. ಇನ್ನು ಒಮಾನ್ ವಿರುದ್ಧ ಕೊನೆಯ ಪಂದ್ಯವಾಡಬೇಕಿದೆ. ಈ ಪಂದ್ಯಕ್ಕಾಗಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿದ್ದಾರೆ.

1 / 5
T20 World Cup 2026: ಟಿ20 ವಿಶ್ವಕಪ್​ಗೆ ಸ್ಟೀವ್ ಸ್ಮಿತ್ (Steve Smith) ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಎಂಟ್ರಿಗೂ ಮುನ್ನವೇ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ. ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಟೀವ್ ಸ್ಮಿತ್​ಗೆ ಸ್ಥಾನ ಲಭಿಸಿರಲಿಲ್ಲ. ಆದರೆ ಝಿಂಬಾಬ್ವೆ ವಿರುದ್ಧದ ಪಂದ್ಯದ ಬಳಿಕ ಮಿಚೆಲ್ ಮಾರ್ಷ್​​ ಗಾಯಗೊಂಡಿದ್ದ ಹಿನ್ನಲೆಯಲ್ಲಿ ಸ್ಮಿತ್ ಅವರನ್ನು ಮೀಸಲು ಆಟಗಾರರನಾಗಿ ಆಯ್ಕೆ ಮಾಡಲಾಗಿತ್ತು.

2 / 5
ಇದಾಗ್ಯೂ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಮಿಚೆಲ್ ಮಾರ್ಷ್ ಗಾಯದಿಂದ ಚೇತರಿಸಿಕೊಂಡಿರುವುದು. ಆದರೆ  ಫೆಬ್ರವರಿ 16 ರಂದು ಜೋಶ್ ಹೇಝಲ್​​ವುಡ್ ಬದಲಿಯಾಗಿ ಸ್ಟೀವ್ ಸ್ಮಿತ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲು ಕ್ರಿಕೆಟ್ ಆಸ್ಟ್ರೇಲಿಯಾ ಐಸಿಸಿಗೆ ಮನವಿ ಮಾಡಿತ್ತು.

3 / 5
ಇದೀಗ ಐಸಿಸಿ ತಾಂತ್ರಿಕ ಸಮಿತಿಯು ಸ್ಟೀವ್ ಸ್ಮಿತ್ ಅವರ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಅದರಂತೆ ಅವರು ಆಸ್ಟ್ರೇಲಿಯಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಆದರೆ ಈ ಸೇರ್ಪಡೆಗೂ ಮುನ್ನವೇ ಆಸೀಸ್ ಪಡೆ ಟಿ20 ವಿಶ್ವಕಪ್​ನಿಂದಲೇ ಹೊರಬಿದ್ದಿದೆ. 

4 / 5
ಇದಾಗ್ಯೂ ಆಸ್ಟ್ರೇಲಿಯಾ ತಂಡ ಒಮಾನ್ ವಿರುದ್ಧ ಕೊನೆಯ ಪಂದ್ಯವಾಡಬೇಕಿದೆ. ಈ ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಪಂದ್ಯದ ಮೂಲಕ ಅವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದರೂ ಅಚ್ಚರಿಪಡಬೇಕಿಲ್ಲ.

5 / 5
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.